ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಾಂಗ ಸಮುದಾಯ ಸದೃಢವಾಗಲಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಲಹೆ
Last Updated 19 ಸೆಪ್ಟೆಂಬರ್ 2022, 5:24 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಸಮುದಾಯಗಳು ಸಂಘಟಿತವಾಗುವುದರಿಂದ ಹಲವು ಲಾಭಗಳಿವೆ. ರಾಜಕೀಯ ಪ್ರಾತಿನಿಧ್ಯಕ್ಕೂ ಇದು ಸಹಕಾರಿಯಾಗುತ್ತದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದ ಗೋಕುಲ ರಸ್ತೆಯ ಚವ್ಹಾಣ್‌ ಗ್ರೀನ್ ಗಾರ್ಡನ್‌ನಲ್ಲಿ ಬೆಂಗಳೂರಿನ ರಾಜ್ಯ ದೇವಾಂಗ ಸಂಘ ಹಾಗೂ ಹುಬ್ಬಳ್ಳಿಯ ದೇವಾಂಗ ಕೇಂದ್ರೀಯ ಸಮಿತಿ ಭಾನುವಾರ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ಗಣ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಎಲ್ಲಾ ಸಮುದಾಯಗಳು ಸದೃಢವಾಗಬೇಕು. ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದಿರುವವರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ದೇವಾಂಗ ಸಮುದಾಯದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದು, ನೇಕಾರರ ಸಮಸ್ಯೆ ಪರಿಹಾರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಿದೆ’ ಎಂದು ಭರವಸೆ ನೀಡಿದರು.

ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಮಾತನಾಡಿ, ‘ಸಂಘದಿಂದ ಒಟ್ಟು ₹60 ಲಕ್ಷ ಮೊತ್ತವನ್ನು ಎಫ್‌.ಡಿ ಮಾಡಲಾಗಿದ್ದು, ಇದರ ಬಡ್ಡಿ ಮೊತ್ತವನ್ನು ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಬಳಕೆ ಮಾಡಲಾಗುತ್ತಿದೆ. ಪ್ರತಿ ವರ್ಷ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತಿದೆ’ ಎಂದು ತಿಳಿಸಿದರು.

ಕೇಂದ್ರೀಯ ಸಮಿತಿ ಅಧ್ಯಕ್ಷ ನಾಗೇಶ ಬಾಪರೆ, ‘ಹುಬ್ಬಳ್ಳಿಯ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಕೆಲವು ತಾಂತ್ರಿಕ ಸಮಸ್ಯೆಗಳು ‌ಎದುರಾಗಿದ್ದವು. ಶಾಸಕಜಗದೀಶಶೆಟ್ಟರ್‌ಅವರೊಂದಿಗೆಈಸಂಬಂಧಚರ್ಚೆನಡೆಲಾ‌ಗಿದ್ದು, ಶೀಘ್ರ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ. ರೈತರ ಮಕ್ಕಳಿಗೆ ನೀಡುವ ಸೌಲಭ್ಯದ ಮಾದರಿಯಲ್ಲೇ ನೇಕಾರರ ಮಕ್ಕಳಿಗೂ ಸೌಲಭ್ಯ ನೀಡಬೇಕು’ ಎಂದು ಒತ್ತಾಯಿಸಿದರು.

ರಾಜ್ಯಸಭಾ ಸದಸ್ಯ ಕೆ. ನಾರಾಯಣ, ‘ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ದೇವಾಂಗ ಸಂಘವನ್ನು ಸ್ಥಾಪಿಸಲಾಗಿದ್ದು, ಪುರಸ್ಕಾರದ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಸಮಾಜ ಹಿಂದುಳಿದಿದೆ ಎನ್ನುವ ಪರಿಕಲ್ಪನೆ ಬೇಡ. ಎಲ್ಲ ಸಮುದಾಯದವರಿಗೂ ನೇಕಾರರ ಅವಶ್ಯಕತೆ ಇದೆ’ ಎಂದರು.

ಹಂಪಿ ಹೇಮಕೂಟ ಗಾಯತ್ರಿಪೀಠ ಮಹಾ ಸಂಸ್ಥಾನದ ದಯಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬೆಂಗಳೂರಿನ ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಶ್ರೀನಿವಾಸ ಬಳ್ಳಿ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಬಸವರಾಜ ಕೇಲಗಾರ, ಶಾಸಕ ಜಗದೀಶ ಶೆಟ್ಟರ್‌ ಮಾತನಾಡಿದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ 95ಕ್ಕೂ ಹೆಚ್ಚು ಅಂಕ ಗಳಿಸಿದ ರಾಜ್ಯದ 30 ಜಿಲ್ಲೆಗಳ 150 ವಿದ್ಯಾರ್ಥಿಗಳಿಗೆ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಪುರಸ್ಕರಿಸಲಾಯಿತು.

ರಾಜ್ಯ ದೇವಾಂಗ ಸಂಘದ ಪ್ರಧಾನ ಕಾರ್ಯದರ್ಶಿ ಟಿ. ರಾಜೇಶ್‌, ದಶರಥರಾಜ ಕೊಳ್ಳಿ, ಸಂಕಪ್ಪ ಮಾರನಾಳ, ಡಾ.ಜಿ. ರಮೇಶ್, ಡಾ. ಕೆ.ಜಿ. ಬ್ಯಾಕೋಡಿ, ರವೀಂದ್ರ ಪಾಟೀಲ ಇದ್ದರು.

ಸಮುದಾಯಕ್ಕೆ ಆದ್ಯತೆ ನೀಡಲು ಮನವಿ: ‌ದೇವಾಂಗ ಸಮುದಾಯದ ವಿದ್ಯಾರ್ಥಿಗಳಿಗೆ ಐಎಎಸ್‌, ಕೆಎಎಸ್‌ ಹಾಗೂ ನೇಕಾರಿಕೆ ತರಬೇತಿ ನೀಡಲು ಬೆಂಗಳೂರಿನಲ್ಲಿ ಜಾಗ ಮತ್ತು ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರ ಅವಕಾಶ ಕಲ್ಪಿಸಬೇಕು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಮುದಾಯದವರಿಗೆ ಆದ್ಯತೆಯ ಮೇಲೆ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು ಎಂದು ಸಮುದಾಯದ ಮುಖಂಡರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಸಲ್ಲಿಸಿದರು.

ಸಮಾಜದಿಂದ ಜನಗಣತಿ: ‘ರಾಜ್ಯದಲ್ಲಿ ದೇವಾಂಗ ಸಮಾಜದ ಜನಸಂಖ್ಯೆಯಬಗ್ಗೆನಿಖರ ಮಾಹಿತಿ ಕಲೆಹಾಕುವ ಉದ್ದೇಶದಿಂದ ಸಮಾಜದಿಂದಲೇ ಜನಗಣತಿ ನಡೆಸಲಾಗುವುದು’ಎಂದು ದಯಾನಂದಪುರಿ ಸ್ವಾಮೀಜಿ ಹೇಳಿದರು.

‘‌ಸಮಾಜದ ಶಿಕ್ಷಕರು, ಉಪನ್ಯಾಸಕರು ಹಾಗೂ ಮುಖಂಡರು ಇದಕ್ಕೆ ಸಹಕರಿಸಬೇಕು. ಅಲ್ಲದೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ದೇವಾಂಗ ಸಂಘ ಅಸ್ತಿತ್ವಕ್ಕೆ ತರಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT