ಶುಕ್ರವಾರ, ಅಕ್ಟೋಬರ್ 30, 2020
28 °C

ಶಿಕ್ಷಣ ನೀತಿ ಮುಕ್ತ ಚರ್ಚೆ ನಡೆಯಲಿ: ಮಹ್ಮದ್ ಪೀರ್ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನದಲ್ಲಿ ಮುಕ್ತ ಚರ್ಚೆಗೆ ಒಳಪಡಿಸಬೇಕು’ ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್‍ನ (ಎಸ್ಐಒ) ಸಂಘಟನೆಯ ಮುಖ್ಯಸ್ಥ ಮಹ್ಮದ್ ಪೀರ್ ಆಗ್ರಹಿಸಿದರು.

‘ಶಿಕ್ಷಣ ನೀತಿಯ ಬಗ್ಗೆ ಕಸಭೆ ಮತ್ತು ರಾಜ್ಯಸಭೆಯಲ್ಲಿ ಚರ್ಚಿಸದೆ ಏಕಪಕ್ಷೀಯವಾಗಿ ಜಾರಿಗೆ ತರಲು ಬಿಜೆಪಿ ಸರ್ಕಾರ ಮುಂದಾಗಿದೆ. ಈ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ’ ಎಂದು ಶನಿವಾರ ಪತ್ರಿಕಾಗೋಷ್ಠೀಯಲ್ಲಿ ಆತಂಕ ವ್ಯಕ್ತಪಡಿಸಿದರು.

‘ನೀತಿಯ ಕೆಲವು ಅಂಶಗಳು ಗೊಂದಲಕಾರಿಯಾಗಿವೆ. ಅವುಗಳನ್ನು ಮರೆಮಾಚುವ ಉದ್ದೇಶದಿಂದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಜಾರಿಗೊಳಿಸಲು ಹೊರಟಿದೆ ಎಂದು ಕೆಲ ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿ, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಯಬೇಕು’ ಎಂದು ಒತ್ತಾಯಿಸಿದರು.

ಅಬ್ದುಲ್ ಸಲಾಂ ಮತ್ತು ಸಮೀರ್ ಮಾಣಿಕ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು