ಲೆವೆಲ್ ಕ್ರಾಸಿಂಗ್ ಜಾಗೃತಿ ಸಪ್ತಾಹ

ಮಂಗಳವಾರ, ಜೂನ್ 18, 2019
23 °C

ಲೆವೆಲ್ ಕ್ರಾಸಿಂಗ್ ಜಾಗೃತಿ ಸಪ್ತಾಹ

Published:
Updated:
Prajavani

ಹುಬ್ಬಳ್ಳಿ: ಅಂತರರಾಷ್ಟ್ರೀಯ ಲೆವೆಲ್ ಕ್ರಾಸಿಂಗ್ ಜಾಗೃತಿ ಸಪ್ತಾಹದ ಅಂಗವಾಗಿ, ನೈರುತ್ಯ ರೈಲ್ವೆಯು ಭಾನುವಾರ ಹುಬ್ಬಳ್ಳಿ ರೈಲು ನಿಲ್ದಾಣದ ಬಳಿ ವಿಶೇಷ ಜಾಗೃತಿ ಅಭಿಯಾನ ಆರಂಭಿಸಿತು.

ಹುಬ್ಬಳ್ಳಿ ವಿಭಾಗದ ವರಿಷ್ಠ ವಿಭಾಗೀಯ ಸುರಕ್ಷತಾ ಅಧಿಕಾರಿ ಜೆ.ಎಸ್. ರುದ್ರಸ್ವಾಮಿ ಅವರ ನೇತೃತ್ವದಲ್ಲಿ ವಿಭಾಗೀಯ ಕಚೇರಿಯಿಂದ ನಿಲ್ದಾಣದವರೆಗೆ ಜಾಗೃತಿ ನಡಿಗೆ ಹಮ್ಮಿಕೊಳ್ಳಲಾಗಿತು. ಈ ವೇಳೆ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಸಾರುವ ಘೋಷಣಾ ಪತ್ರಗಳನ್ನು ಪ್ರದರ್ಶಿಸಿ, ಘೋಷಣೆಗಳನ್ನು ಕೂಗಲಾಯಿತು.

ಲೆವೆಲ್ ಕ್ರಾಸಿಂಗ್ ಗೇಟ್‍ ದಾಟುವಾಗ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ 1,200ಕ್ಕೂ ಹೆಚ್ಚು ಜನರೊಂದಿಗೆ ಸಮಾಲೋಚನೆ ನಡೆಸಲಾಯಿತು. ಸುರಕ್ಷತೆಗೆ ಸಂಬಂಧಿಸಿದ ಮುನ್ನೆಚ್ಚರಿಕೆಗಳು, ಕಾನೂನುಗಳ ಕುರಿತು ಮಾಹಿತಿಯನ್ನು ಒಳಗೊಂಡ ಪೋಸ್ಟರ್‍ಗಳು, ಸ್ಟಿಕ್ಕರ್‍ಗಳು ಹಾಗೂ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

ಸಪ್ತಾಹದ ಅಂಗವಾಗಿ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯ ಲೆವೆಲ್ ಕ್ರಾಸಿಂಗ್ ಗೇಟ್‍ಗಳು ಹಾಗೂ ಇತರ ಸ್ಥಳಗಳಲ್ಲಿ ಈ ತಂಡಗಳು ಜಾಗೃತಿ ಕಾರ್ಯಕ್ರಮಗಳನ್ನು ಜೂನ್ 8ರವರೆಗೆ ಹಮ್ಮಿಕೊಳ್ಳಲಿವೆ ಎಂದು ಪ್ರಕಟಣೆ ತಿಳಿಸಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !