ಹುಬ್ಬಳ್ಳಿ: ‘ರಾಜ್ಯ ಸರ್ಕಾರ ನಡೆಸುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿ ಕಾಲಂನಲ್ಲಿ ಸಮುದಾಯದವರು ‘ಲಿಂಗಾಯತ ರಡ್ಡಿ’ ಎಂದೇ ಬರೆಸಬೇಕು’ ಎಂದು ರಾಜ್ಯ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರಡ್ಡಿ ಸಮಾಜದ ಗೌರವಾಧ್ಯಕ್ಷ ಜಿ.ಎಸ್.ಪಾಟೀಲ ತಿಳಿಸಿದರು.

‘ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ. ಲಿಂಗಾಯತ ರಡ್ಡಿ ಎಂದು ಬರೆಸುವ ಸಂಬಂಧ ಸಮುದಾಯದ ರಾಜ್ಯಮಟ್ಟದ ಪದಾಧಿಕಾರಿಗಳು ಮತ್ತು ಪ್ರಮುಖರ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧರಿಸಲಾಗಿದೆ’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

‘ಸಮುದಾಯದ ಪ್ರಗತಿಗೆ ನಾಲ್ಕು ಕಂದಾಯ ವಿಭಾಗಗಳಲ್ಲೂ ನಿವೇಶನ ಖರೀದಿಸಿ, ಮಕ್ಕಳಿಗಾಗಿ ಹಾಸ್ಟೆಲ್ ನಿರ್ಮಿಸುತ್ತೇವೆ. ಹುಬ್ಬಳ್ಳಿಯಲ್ಲಿ ಸಹಕಾರ ಬ್ಯಾಂಕ್ ಸ್ಥಾಪಿಸುತ್ತೇವೆ’ ಎಂದರು.

ಶಾಸಕ ಸಿ.ಎಸ್.ನಾಡಗೌಡ ಅವರು, ‘ವೀರಶೈವ–ಲಿಂಗಾಯತ, ಪ್ರತ್ಯೇಕ ಧರ್ಮ ವ್ಯಾಜ್ಯಕ್ಕೆ ನಾವು ಹೋಗಲ್ಲ. ಇರುವ ಸ್ಥಾನ ಉಳಿಸಿಕೊಳ್ಳಲು ಕಾರ್ಯಚಟುವಟಿಕೆ ಹಮ್ಮಿಕೊಳ್ಳುತ್ತೇವೆ’ ಎಂದರು.

ಶಾಸಕರಾದ ಬಸವರಾಜ ರಾಯರಡ್ಡಿ, ಎಸ್.ಆರ್. ಪಾಟೀಲ, ಹಂಪನಗೌಡ ಬಾದರ್ಲಿ, ಶರಣಗೌಡ ಕಂದಕೂರ, ಅಮರೇಗೌಡ ಬಯ್ಯಾಪುರ, ಸಂಘಟನೆಯ ಅಧ್ಯಕ್ಷ ಶೇಖರಗೌಡ ಪಾಟೀಲ, ಯುವ ಘಟಕದ ರಾಜ್ಯ ಅಧ್ಯಕ್ಷ ಅನಿಲಕುಮಾರ ತೆಗ್ಗಿನಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.