ಕಲಘಟಗಿ: ತಾಲ್ಲೂಕು ಒಂಬತ್ತನೇ ಕನ್ನಡ ಸಾಹಿತ್ಯ ಸಮ್ಮೇಳನ ಏ.7ರಂದು ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಜರುಗಲಿದೆ.

ಬೆಳಿಗ್ಗೆ 8 ಗಂಟೆಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಪಾಲ್ಕರ ರಾಷ್ಟ್ರ ಧ್ವಜಾರೋಹಣ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ ನಾಡ ಧ್ವಜಾರೋಹಣ, ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಸೋಲಾರಗೊಪ್ಪ ಪರಿಷತ್ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಶಿವಣ್ಣ ಅದರಗುಂಚಿ ಅವರನ್ನು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಬೆಳಿಗ್ಗೆ 8.30ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದ್ದು, ಹಿರಿಯ ಸೆಷನ್ಸ್ ನ್ಯಾಯಾಧೀಶ ರವೀಂದ್ರ ಹೊನೋಲೆ, ಸೆಷನ್ಸ್ ನ್ಯಾಯಾಧೀಶ ಗಣೇಶ ಎನ್., ಪಟ್ಟಣ ಪಂಚಾಯಿತಿ ಉಪ್ಪಾಧ್ಯಕ್ಷ ಗಂಗಾಧರ ಗೌಳಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಕಡ್ಲಾಸ್ಕರ ಉಪಸ್ಥಿತರಿರಲಿದ್ದಾರೆ.

ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಪಟ್ಟಣದ ಹನ್ನೆರಡು ಮಠದ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಸು ಬೇವಿನಗಿಡದ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಆರ್.ಪಾಟೀಲ, ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಮುರಳ್ಳಿ, ವೈ.ಬಿ.ದಾಸನಕೋಪ, ಸಿ.ಎಫ್.ಪಾಟೀಲ, ಶಶಿಧರ್ ನಿಂಬಣ್ಣವರ ಉಪಸ್ಥಿತರಿರಲಿದ್ದಾರೆ.

ಕವಿಗೋಷ್ಠಿ, ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ ಎಂದು ಕಸಾಪ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗಿರೀಶ ಮುಕ್ಕಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.