ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿದೇಶಾಂಗ ಸಚಿವೆಯಾಗಿ ಸುಷ್ಮಾ ವಿಫಲರೇ?’: ‘ಇಲ್ಲ’

Last Updated 27 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಾಂಗ ಸಚಿವೆಯಾಗಿ ಸುಷ್ಮಾ ಸ್ವರಾಜ್ ವಿಫಲರಾಗಿದ್ದಾರೆಯೇ ಎಂಬುದರ ಬಗ್ಗೆ ಕಾಂಗ್ರೆಸ್ ಪಕ್ಷವು ಟ್ವಿಟರ್‌ನಲ್ಲಿ ನಡೆಸಿದ್ದ ಸಮೀಕ್ಷೆಯಲ್ಲಿ, ಸುಷ್ಮಾ ಪರವಾಗಿಯೇ ಫಲಿತಾಂಶ ಬಂದಿದೆ. ಆ ಫಲಿತಾಂಶವನ್ನು ಸ್ವತಃ ಸುಷ್ಮಾ ರಿ–ಟ್ವೀಟ್ ಮಾಡಿದ್ದಾರೆ.

‘ಇರಾಕ್‌ನಲ್ಲಿ 39 ಭಾರತೀಯರ ಹತ್ಯೆ ವಿಚಾರದಲ್ಲಿ ವಿದೇಶಾಂಗ ಸಚಿವೆಯಾಗಿ ಸುಷ್ಮಾ ಸ್ವರಾಜ್ ವಿಫಲರಾಗಿದ್ದಾರೆ ಎಂದು ನೀವು ಭಾವಿಸಿದ್ದೀರಾ’ ಎಂದು ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ನಡೆಸಿದ್ದ ಸಮೀಕ್ಷೆಯಲ್ಲಿ ಕೇಳಿತ್ತು.

ಈ ಸಮೀಕ್ಷೆಯಲ್ಲಿ 39,879 ಮಂದಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅದರಲ್ಲಿ ಶೇ 76ರಷ್ಟು ಮಂದಿ ‘ಇಲ್ಲ’ ಎಂದಿದ್ದರೆ, ಶೇ 24ರಷ್ಟು ಮಂದಿ ‘ಹೌದು’ ಎಂದು ಹೇಳಿದ್ದಾರೆ. ಸಮೀಕ್ಷೆಯ ಅಂತಿಮ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಸುಷ್ಮಾ, ಅದನ್ನು ರಿ–ಟ್ವೀಟ್ ಮಾಡಿದ್ದಾರೆ.

39 ಜನರ ಹತ್ಯೆ ವಿಚಾರದ ಬಗ್ಗೆ ಸಮೀಕ್ಷೆ ನಡೆಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅದರ ಜತೆಯಲ್ಲೇ ಸುಷ್ಮಾ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ.

ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣ ಘಟಕದ ಮುಖ್ಯಸ್ಥೆ ದಿವ್ಯ ಸ್ಪಂದನ (ರಮ್ಯಾ) ಅವರು ಸುಷ್ಮಾ ರಿ–ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT