ಗೋವಾ ಸಿಎಂ ಹೇಳಿಕೆಯಿಂದ ಏನು ಆಗಲ್ಲ: ಬೆಲ್ಲದ
ಹುಬ್ಬಳ್ಳಿ: ‘ಮಹದಾಯಿ ವಿಷಯಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಹೇಳಿಕೆಯಿಂದ ಏನೂ ಆಗುವುದಿಲ್ಲ. ಅದು ರಾಜಕೀಯ ಹೇಳಿಕೆಯಾಗಿದ್ದು ಗಂಭೀರವಾಗಿ ಪರಿಗಣಿಸಬೇಕಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು. ‘ಮಹದಾಯಿ ವಿಷಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಬದ್ಧತೆ ತೋರಿಸುತ್ತಿಲ್ಲ. ಸರಿಯಾದ ಸಮಯಕ್ಕೆ ರಾಜ್ಯದ ಅಧಿಕಾರಿಗಳು ಸಭೆಗೆ ಹಾಜರಾಗಿ ದಾಖಲಾತಿ ಒದಗಿಸುವ ಕೆಲಸ ಮಾಡಬೇಕು’ ಎಂದರು. ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ವಿಷಯಕ್ಕೆ ಸಂಬಂಧಿದಂತೆ ಕ್ಷಮೆಯಾಚಿಸುವಂತೆ ಶಾಸಕ ವಿಜಯಾನಂದ ಕಾಶಪ್ಪನವರ ಒತ್ತಾಯಿಸಿದ ಕುರಿತು ಕೇಳಿದ ಪ್ರಶ್ನೆಗೆ ‘ಧರ್ಮ ಮತ್ತು ಸಮಾಜದ ವಿಷಯಗಳನ್ನು ಬಹಿರಂಗವಾಗಿ ಚರ್ಚಿಸುವುದಿಲ್ಲ’ ಎಂದರು.