ಹುಬ್ಬಳ್ಳಿ: 'ಧಾರವಾಡ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯದಂತೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಮತ್ತೊಮ್ಮೆ ಮನವಿ ಮಾಡುತ್ತೇನೆ' ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

'ಕ್ಷೇತ್ರದ ಜನ ಪಕ್ಷದ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರವಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಕೈ ಹಾಕಬಾರದು. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಬಾರದೆಂದು ಅವರನ್ನು ಕೋರುವೆ. ಮುಂದೆ ಏನು ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ' ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ, ಪ್ರಧಾನಿ ಮೋದಿ ಪರವಾದ ಅಲೆ ಇದೆ. ಈ ಕ್ಷೇತ್ರದಲ್ಲಿ ಜೋಶಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮನೆ ಮನೆಗೆ ಗೊತ್ತಿದೆ. ಅವರೊಬ್ಬ ಪ್ರಬುದ್ಧ ರಾಜಕಾರಣಿಯಾಗಿದ್ದಾರೆ ಎಂದು ತಿಳಿಸಿದರು.

ಸಿ.ಟಿ. ರವಿ, ಶಂಕರ ಪಾಟೀಲ ಮುನೇನಕೊಪ್ಪ ಉಪಸ್ಥಿತರಿದ್ದರು.
.ಧಾರವಾಡ ಲೋಕಸಭಾ ಕ್ಷೇತ್ರ: ರಾಜಕೀಯ ಅಖಾಡಕ್ಕೆ ದಿಂಗಾಲೇಶ್ವರ ಸ್ವಾಮೀಜಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.