ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ, ಮಿತ್ರಪಕ್ಷ ಸೋಲಿಸಿ: ಸಿಐಟಿಯು ಕಾರ್ಯದರ್ಶಿ ಕೆ. ಮಹಾಂತೇಶ

Published 24 ಏಪ್ರಿಲ್ 2024, 8:10 IST
Last Updated 24 ಏಪ್ರಿಲ್ 2024, 8:10 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ಕಾರ್ಮಿಕ ವಿರೋಧಿ ‌ನೀತಿ ಅನುಸರಿಸುತ್ತಿರುವ ಬಿಜೆಪಿ ಹಾಗೂ ಮಿತ್ರಪಕ್ಷಗಳನ್ನು ದೇಶದ ಕಾರ್ಮಿಕ ವರ್ಗವು ಒಗ್ಗಟ್ಟಾಗಿ ಸೋಲಿಸುವ ಮೂಲಕ ಪ್ರಜಾಪ್ರಭುತ್ವ ಹಾಗೂ ಧರ್ಮ ನಿರಪೇಕ್ಷ ಪಕ್ಷಗಳನ್ನು ಗೆಲ್ಲಿಸಬೇಕು' ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ. ಮಹಾಂತೇಶ ಮನವಿ ಮಾಡಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದುಡಿಯುವ ವರ್ಗಕ್ಕೆ ಬೆಲೆ ಇಲ್ಲದಂತಾಗಿದೆ. ಬಿಜೆಪಿ ಶ್ರೀಮಂತರ ಪರವಾಗಿ ನಿಂತು, ಬಡವರು ಮತ್ತು ದುಡಿಯುವ ವರ್ಗದ ವಿರುದ್ಧವಾಗಿ ಕೆಲಸ‌ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ದೇಶದ ಕಾರ್ಮಿಕ ವರ್ಗ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ ಚಲಾಯಿಸಬೇಕು' ಎಂದರು.

'ಬಿಜೆಪಿ ಸರ್ಕಾರ ಕಾರ್ಮಿಕ ವರ್ಗಕ್ಕೆ ಹಾಗೂ ದೇಶದ ಮತದಾರರಿಗೆ ಮಾಡಿರುವ ಅನ್ಯಾಯದ ಕುರಿತು ಜಾಗೃತಿ‌ ಮೂಡಿಸಲು, ಗುರುವಾರ(ಎಪ್ರಿಲ್ 25) ದಿಂದ ಮೇ 5 ರ ವರೆಗೆ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ಸಭೆಗಳನ್ನು ನಡೆಸಲಿದೆ' ಎಂದು ಹೇಳೀದರು.

ಇದೇ ವೇಳೆ ಸಿಐಟಿಯುನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು. ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ, ಜಿಲ್ಲಾ ಘಟಕದ ಅಧ್ಯಕ್ಷ ಬಿ.ಐ. ಈಳಗೇರ, ಸುನಂದಾ ಚಿಗರಿ, ಬಸವಣ್ಣಪ್ಪ ನೇಗಲಿ, ಬಿ.ಎನ್. ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT