ಹುಬ್ಬಳ್ಳಿ: ದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿ, ಹಿಂದೂ ಜನಜಾಗೃತಿ ಸಮಿತಿಯ ರಣರಾಗಿಣಿ ಶಾಖೆಯ ಸದಸ್ಯರು ಒತ್ತಾಯಿಸಿದ್ದಾರೆ.

ನಗರದ ಮಿನಿ ವಿಧಾನಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ಸದಸ್ಯರು, ‘ರಾಜ್ಯದಲ್ಲಿಯೂ ಲವ್ ಜಿಹಾದ್ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿವೆ. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

‘ಮುಸ್ಲಿಂ ವ್ಯಕ್ತಿಯೊಬ್ಬ ಮುಂಬೈ ಮೂಲದ ಹಿಂದೂ ಯುವತಿಯನ್ನು ಕತ್ತರಿಸಿ, ಬರ್ಬರವಾಗಿ ಹತ್ಯೆಗೈದಿದ್ದಾನೆ. ಈ ಘಟನೆ ಹಿಂದೆ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ರಾಯಚೂರಿನಲ್ಲಿ ಹಿಂದೂ ಯುವತಿಯು ಲವ್ ಜಿಹಾದ್ ಬಲೆಗೆ ಸಿಲುಕಿರುವುದು ಪತ್ತೆಯಾಗಿದೆ. ಉತ್ತರಪ್ರದೇಶ ಲಖನೌದಲ್ಲಿಯೂ ಇಂತಹದ್ದೇ ಪ್ರಕರಣಗಳು ನಡೆಯುತ್ತಿವೆ. ಇಂತಹ ಘಟನೆಗಳ ತಡೆಗೆ ಕಠಿಣವಾದ ಕಾಯ್ದೆ ಜಾರಿಗೆ ತರಬೇಕು’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಶಾಖೆಯ ಸಂಯೋಜಕಿ ಕವಿತಾ, ರೂಪಾ ದವಳಗಿ, ವಿದುಲಾ ಹಳದಿಪುರ, ಗೀತಾಂಜಲಿ, ಸುಧಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.