ವಿಷ ಕುಡಿದು ಪ್ರೇಮಿಗಳ ಆತ್ಮಹತ್ಯೆ
ನವಲಗುಂದ: ಅಂತರ್ಜಾತಿ ವಿವಾಹಕ್ಕೆ ಮನೆಯವರು ಒಪ್ಪದ ಕಾರಣ ಪ್ರೇಮಿಗಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಸೋಮವಾರ ರಾತ್ರಿ ನಡೆದಿದೆ.
ತಡಹಾಳ ಗ್ರಾಮದ ಸಾವಿತ್ರಿ ಮುತ್ತಪ್ಪ ನರಗುಂದ (20) ಮಲ್ಲಪ್ಪ ದುರ್ಗಪ್ಪ ಮಾದರ (23) ಆತ್ಮಹತ್ಯೆ ಮಾಡಿಕೊಂಡವರು. ಸಾವಿತ್ರಿ ಕುರುಬ ಹಾಗೂ ಮಲ್ಲಪ್ಪ ಪರಿಶಿಷ್ಟ ಜಾತಿಗೆ ಸೇರಿದವರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ವಿವಾಹ ಆಗುವ ಪ್ರಸ್ತಾವಕ್ಕೆ ಮನೆಯವರು ಒಪ್ಪಿರಲಿಲ್ಲ. ಹುಡುಗಿಗೆ ಬೇರೊಬ್ಬರ ಹುಡುಗನೊಂದಿಗೆ ಮದುವೆ ಮಾಡಲು ನಿರ್ಧರಿಸಿದ್ದರು. ಇದರಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ವಿಷ ಕುಡಿದ ವಿಷಯ ತಿಳಿದ ತಕ್ಷಣ ಅವರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.