ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls 2024: ಬಂಡಾಯ ಒಂದೆರಡು ದಿನಗಳಲ್ಲಿ ಸರಿಹೋಗಲಿದೆ- ಯಡಿಯೂರಪ್ಪ

Published 16 ಮಾರ್ಚ್ 2024, 14:10 IST
Last Updated 16 ಮಾರ್ಚ್ 2024, 14:10 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್‌ ಸಿಗದೇ ಬಂಡಾಯವೆದ್ದಿರುವವರ ಜೊತೆ ಮಾತುಕತೆ ನಡೆಯುತ್ತಿದೆ. ಒಂದೆರಡು ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈಶ್ವರಪ್ಪ ಸೇರಿದಂತೆ ಬಂಡಾಯ ಎದ್ದಿರುವವರ ಜೊತೆಗೆ ಮಾತುಕತೆ ನಡೆದಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಲೋಕಸಭೆ ಚುನಾವಣೆಗೆ ದಿನಾಂಕವೂ ಘೋಷಣೆಯಾಗಿದೆ. ದೇಶದಾದ್ಯಂತ ಬಿಜೆಪಿ ಪರ ಅಲೆ ಇದೆ. 3ನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗುವುದು ನಿಶ್ಚಿತ. ರಾಜ್ಯದಿಂದ 25ರಿಂದ 26 ಕ್ಷೇತ್ರಗಳನ್ನು ಗೆದ್ದು ಮೋದಿ ಅವರಿಗೆ ಕೊಡುಗೆ ನೀಡುತ್ತೇವೆ’ ಎಂದರು.

ಎಸ್‌.ಸಿ, ಎಸ್‌.ಟಿ, ಹಿಂದುಳಿದ ವರ್ಗಗಳು ಹಾಗೂ ಯುವಕರ ಕಡೆ ಹೆಚ್ಚು ಗಮನ ಕೊಡುವಂತೆ ಮೋದಿ ಅವರು ಸಲಹೆ ನೀಡಿದ್ದಾರೆ. ಅದರಂತೆ, ಮಾಡುತ್ತೇವೆ. ಈಗಿನಿಂದಲೇ ಮುಖಂಡರು ಪ್ರಚಾರ ಶುರು ಮಾಡಲಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT