ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವಲಗುಂದ: ಐವರಿಗೆ ಹುಚ್ಚು ನಾಯಿ ಕಡಿತ

Published 19 ಮಾರ್ಚ್ 2024, 15:57 IST
Last Updated 19 ಮಾರ್ಚ್ 2024, 15:57 IST
ಅಕ್ಷರ ಗಾತ್ರ

ನವಲಗುಂದ: ತಾಲ್ಲೂಕಿನ ಕುಮಾರಗೊಪ್ಪ ಗ್ರಾಮದಲ್ಲಿ ಹುಚ್ಚು ನಾಯಿ ಕಡಿತದಿಂದ ನಾಲ್ಕು ವರ್ಷದ ಬಾಲಕಿ ಸೇರಿ ಐವರು ಗಾಯಗೊಂಡಿದ್ದಾರೆ.

ಯಮನೂರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕುಮಾರಗೊಪ್ಪ ಗ್ರಾಮದ ರಸ್ತೆಯಲ್ಲಿ ಜನರು ಓಡಾಡುವಾಗಲೇ ಕಾಣಿಸಿಕೊಂಡ ನಾಯಿ, ಹಲವರಿಗೆ ಕಚ್ಚಿ ಗಾಯಗೊಳಿಸಿದೆ. ಕುರಿಮರಿಗಳಿಗೂ ಕಚ್ಚಿದೆ.

ಗಂಭೀರವಾಗಿ ಗಾಯಗೊಂಡ ಮಗುವಿಗೆ ನವಲಗುಂದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಉಳಿದ ಗಾಯಾಳುಗಳಿಗೆ ನವಲಗುಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಾರೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT