ಶುಕ್ರವಾರ, ಫೆಬ್ರವರಿ 21, 2020
25 °C

ಮಹದಾಯಿ: ಕ್ರಮಕ್ಕೆ ಸಿ.ಎಂಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಮಹದಾಯಿ–ಕಳಸಾ ಬಂಡೂರಿ ವಿಚಾರದಲ್ಲಿ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ಮುಖಂಡರು ಭಾನುವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದ ಮುಖಂಡರು ‘13.5 ಟಿ.ಎಂ.ಸಿ. ಅಡಿ ನೀರು ಹಂಚಿಕೆಗೆ ಆದೇಶವಾಗಿದ್ದರೂ, ಇದುವರೆಗೆ ಕ್ರಮ ಕೈಗೊಂಡಿಲ್ಲ. ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಾಕಷ್ಟು ಸಮಸ್ಯೆಯಾಗಿದೆ. ಕೆಲವೆಡೆ ಹೊಲಗಳಿಗೆ ಹೋಗಲು ದಾರಿಯೂ ಇಲ್ಲದಂತಾಗಿದೆ. ಆದ್ದರಿಂದ ಈ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಬೇಕು’ ಎಂದು ಕೋರಿದರು.

ಮನವಿ ಆಲಿಸಿದ ಬಳಿಕ ಯಡಿಯೂರಪ್ಪ ‘ಗೋವಾ ಮುಖ್ಯಮಂತ್ರಿ ಜೊತೆ ಎರಡು ದಿನಗಳ ಹಿಂದೆ ಮಾತನಾಡಿದ್ದೇನೆ’ ಎಂದರು.

ಸಮಿತಿಯ ಪ್ರಮುಖರಾದ ಸಿದ್ದಣ್ಣ ತೇಜಿ, ಬಾಬಾಜಾನ್‌ ಎ. ಮುಧೋಳ, ರಮೇಶ ಬೋಸ್ಲೆ, ಸಂದೇಶ ತೇಜಿ,  ಎನ್‌.ಆರ್‌. ಖಾಜಿ, ಆಂಜನೇಯ ಪೂಜಾರಿ ಶಿವು ಪಡೆಸೂರ ಇದ್ದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಜಗದೀಶ ಶೆಟ್ಟರ್‌, ಬಸವರಾಜ ಬೊಮ್ಮಾಯಿ, ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಸಿ.ಎಂ ನಿಂಬಣ್ಣನವರ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ, ಜಿಲ್ಲಾಧಿಕಾರಿ ದೀಪಾ ಚೋಳನ್, ಪೊಲೀಸ್ ಕಮಿಷನರ್‌ ಆರ್‌. ದಿಲೀಪ್, ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಬಿ.ಸಿ ಸತೀಶ್, ಉಪವಿಭಾಗಾಧಿಕಾರಿ ಮಹಮದ್ ಜುಬೇರ್, ಹುಬ್ಬಳ್ಳಿ ತಹಶೀಲ್ದಾರ್‌ ಶಶಿಧರ ಮಾಡ್ಯಾಳ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು