ನವಲಗುಂದ: ಮಹದಾಯಿ ನದಿಯ ಕಳಸಾ ಬಂಡೂರಿ ಯೋಜನೆ ಜಾರಿಗೆ ಸಂಬಂಧ ರಾಜ್ಯದ ಪ್ರಸ್ತಾವವನ್ನು ಕೇಂದ್ರ ಉನ್ನತಾಧಿಕಾರಿಗಳ ಸಮಿತಿ ತಿರಸ್ಕರಿಸಿದೆ ಎಂಬ ಮಾಹಿತಿ ಇದೆ. ಈ ನಿರ್ಧಾರವನ್ನು ರೈತರು ಮತ್ತು ವ್ಯಾಪ್ತಿಯ ನಾಗರಿಕರ ಪರವಾಗಿ ಉಗ್ರವಾಗಿ ಖಂಡಿಸುತ್ತೇವೆ ಎಂದು ಕರ್ನಾಟಕ ರೈತ ಸೇನೆ ರಾಜ್ಯಾಧ್ಯಕ್ಷ ಶಂಕರ ಅಂಬಲಿ ತಿಳಿಸಿದ್ದಾರೆ.

‘ಒಂದು ಕುಡಿಯುವ ನೀರಿನ ವ್ಯಾಜ್ಯವನ್ನು ಎರಡು ದೇಶಗಳ ವ್ಯಾಜ್ಯದ ರೀತಿಯಲ್ಲಿ 50 ವರ್ಷಗಳಿಂದಲೂ ಜೀವಂತವಾಗಿ ಇಡಲಾಗಿದೆ’ ಎಂದು ಟೀಕಿಸಿದರು. ಕೂಡಲೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ ನೀಡಬೇಕು. ತಮ್ಮಿಂದ ಸಾಧ್ಯವಿಲ್ಲ ಎಂಬುದನ್ನಾದರೂ ಹೇಳಿ ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಪ್ರಸ್ತಾವ ಕಳಿಸಿ ಕೈತೊಳೆದುಕೊಂಡರೆ ಸಾಲದು. ಈ ಯೋಜನೆ ಜಾರಿಗೆ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಳಂಬ ಧೋರಣೆ ಮಾಡಬಾರದು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-24-602464922

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.