ಬುಧವಾರ, ಡಿಸೆಂಬರ್ 2, 2020
17 °C
ಚಿಕಿತ್ಸೆಗಾಗಿ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದ ಪತಿ ಸಿ.ಎಸ್‌. ಶಿವಳ್ಳಿ ಸ್ಮರಿಸಿದ ಶಾಸಕಿ

ಕಿಮ್ಸ್‌ಗೆ ಕುಸುಮಾವತಿ ಭೇಟಿ: ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಕುಂದಗೋಳ ಕ್ಷೇತ್ರದ ನೂತನ ಶಾಸಕಿ ಕುಸುಮಾವತಿ ಶಿವಳ್ಳಿ ಅವರು ಕಿಮ್ಸ್‌ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ, ಪರಿಶೀಲಿಸಿದರು.

ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ರೋಗಿಗಳ ಮತ್ತು ಸಾರ್ವಜನಿಕರ ಆಹವಾಲು ಆಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕಿಮ್ಸ್‌ ಆಸ್ಪತ್ರೆ ಬಗ್ಗೆ ಪತಿ ಸಿ.ಎಸ್‌.ಶಿವಳ್ಳಿ ವಿಶೇಷ ಕಾಳಜಿ ಹೊಂದಿದ್ದರು. ಬಡವರಿಗೆ ಗುಣಮಟ್ಟದ ಚಿಕಿತ್ಸೆ ಸಿಗುವಂತಾಗಬೇಕು ಎಂದು ಅದರ ಸುಧಾರಣೆಗೆ ಆದ್ಯತೆ ನೀಡಿದ್ದರು. ಅವರ ಆಶಯದಂತೆ ಕಿಮ್ಸ್‌ ಸುಧಾರಣೆಯಾಗಬೇಕು ಎಂಬುದು ನನ್ನ ಆಶಯವೂ ಆಗಿದೆ’ ಎಂದು ಹೇಳಿದರು.

‘ಕಿಮ್ಸ್‌ನಲ್ಲಿ ಲಭಿಸುತ್ತಿರುವ ಆರೋಗ್ಯ ಸೇವೆಗಳ ಬಗ್ಗೆ ರೋಗಿಗಳು ನನ್ನ ಬಳಿ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನಷ್ಟು ಗುಣಮಟ್ಟದ ಸೇವೆ ಬಡ ರೋಗಿಗಳಿಗೆ ಲಭಿಸುವಂತಾಗಬೇಕು. ಈ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ’ ಎಂದು ತಿಳಿಸಿದರು.

‘ಕಿಮ್ಸ್‌ಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು, ಕುಂದುಕೊರತೆಗಳನ್ನು ನಿವಾರಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು’ ಎಂದು ಅವರು ಹೇಳಿದರು.

ಪತಿಯ ನೆನಪು: ಪತಿ ಸಿ.ಎಸ್‌. ಶಿವಳ್ಳಿ ಅವರು ಚಿಕಿತ್ಸೆಗಾಗಿ ಕಿಮ್ಸ್‌ಗೆ ಭೇಟಿ ನೀಡುತ್ತಿದ್ದ ಹಾಗೂ ತಾವು  ಮಕ್ಕಳಿಗೆ ಕಿಮ್ಸ್‌ನಲ್ಲೇ ಜನ್ಮ ನೀಡಿದ ಸಂದರ್ಭವನ್ನು ಶಾಸಕಿ ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಕಿಮ್ಸ್‌ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ, ಮುಖಂಡ ಷಣ್ಮುಖ ಶಿವಳ್ಳಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು