ಭಾನುವಾರ, ಆಗಸ್ಟ್ 14, 2022
28 °C

ಕೆಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಹೊರಕೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡ: ಪ್ರತಿಷ್ಠಿತ ಕೆಸಿಸಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಹೊರಕೇರಿ ಅವಿರೋಧವಾಗಿ ಆಯ್ಕೆಯಾದರು.

ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಹೊರಕೇರಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಏಕೈಕ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾ ಅಧಿಕಾರಿ ಎಂ.ಬಿ.ಪೂಜಾರ ಅವರು ಹೊರಕೇರಿ ಅವರ ಅವಿರೋಧವಾಗಿ ಆಯ್ಕೆಯನ್ನು ಘೋಷಿಸಿದರು.

ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ಬಾಪುಗೌಡ ಪಾಟೀಲ ರಾಜೀನಾಮೆ ನೀಡಿದ್ದರಿಂದ ಹೊಸ ಅಯ್ಕೆ ಪ್ರಕ್ರಿಯೆ ಶುಕ್ರವಾರ ಜರುಗಿತು. ಬದಲಾದ ರಾಜಕೀಯ ಬೆಳವಣಿಯಲ್ಲಿ ಬಿಜೆಪಿ ಬೆಂಬಲಿತ ಮಲ್ಲಿಕಾರ್ಜುನ ಹೊರಕೇರಿ ಅವರು ಅಧ್ಯಕ್ಷ ಗಾದಿಗೇರುವುದು ನಿಶ್ಚಿತವಾಗಿತ್ತು.

ಮಲ್ಲಿಕಾರ್ಜುನ ಅವರು ಅಮರಗೋಳ ಕ್ಷೇತ್ರದ ಪಾಲಿಕೆ ಸದಸ್ಯರಾಗಿದ್ದರು. ಕೆಸಿಸಿ ಬ್ಯಾಂಕ್ ನಿರ್ದೇಶಕರಾಗಿದ್ದ ಅವರು ಅಧ್ಯಕ್ಷ ಸ್ಥಾನದ ಪ್ರಭಲ ಆಕಾಂಕ್ಷಿಯಾಗಿದ್ದರು.

ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಹೊರಕೇರಿ ಅವರನ್ನು ಉಪಾಧ್ಯಕ್ಷ ಎಸ್.ವೈ.ಪಾಟೀಲ, ನಿರ್ದೇಶಕರಾದ ಗಂಗಾಧರ ಸಾತಣ್ಣವರ, ಶಿವಕುಮಾರಗೌಡ ಪಾಟೀಲ, ಮಂಜುನಾಥ ಮುರಳ್ಳಿ, ಜಿ.ಪಿ.ಪಾಟೀಲ ಇನ್ನಿತರರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಮುನಿಯಪ್ಪ, ಪ್ರಧಾನ ವ್ಯವಸ್ಥಾಪಕ ಶಿವಾನಂದ ಹೂಗಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು