ಭಾನುವಾರ, ಜೂನ್ 26, 2022
23 °C

ಅಭಿವೃದ್ಧಿ ಪರವಾಗಿ ಕೆಲಸ ಮಾಡುವ ನಿತಿನ್ ಗಡ್ಕರಿ ಬಗ್ಗೆ ವಿಶೇಷ ಗೌರವವಿದೆ: ಖರ್ಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಅಭಿವೃದ್ಧಿ ಪರವಾಗಿ ಕೆಲಸ ಮಾಡುವ ಸಚಿವ ನಿತಿನ್ ಗಡ್ಕರಿ ಅವರ ಬಗ್ಗೆ ನನಗೆ ವಿಶೇಷ ಗೌರವವಿದೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ನಡೆದ ₹12,795 ಕೋಟಿ ವೆಚ್ಚದ 925 ಕಿ.ಮೀ. ಉದ್ದದ 26 ರಾಷ್ಟ್ರೀಯ ಹೆದ್ದಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದ್ದಾರೆ. ಕೇಂದ್ರ ಭೂ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ನೆರವೇರಿಸಿದ್ದಾರೆ.

ಇದನ್ನೂ ಓದಿ: 

‘ರಾಜಕೀಯ ಬದಿಗಿಟ್ಟು ಗಡ್ಕರಿ ಅವರ ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಲು ಇಲ್ಲಿಗೆ ಬಂದಿರುವೆ. ಮೊದಲ ಬಾರಿಗೆ ಗಡ್ಕರಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ’ ಎಂದು ಖರ್ಗೆ ಹೇಳಿದ್ದಾರೆ.

‘ಯಾವುದೇ ಅಭಿವೃದ್ಧಿ ಕೆಲಸಗಳ ಕುರಿತು ಗಡ್ಕರಿ ಅವರೊಂದಿಗೆ ಪ್ರಸ್ತಾಪಿಸಿದರೆ ತಕ್ಷಣ ಒಪ್ಪಿಗೆ ಕೊಡುತ್ತಾರೆ. ಯೋಜನೆಯೊಂದರ ಪ್ರಸ್ತಾವಕ್ಕೆ ಸಂಬಂಧಿಸಿದಂತೆ, ಹಿಂದೊಮ್ಮೆ ಕಾಂಗ್ರೆಸ್ ಪಕ್ಷದ ಕಚೇರಿಗೂ ಬಂದಿದ್ದರು. ಯಾವ ರಾಜ್ಯದವರು ಎಂದು ನೋಡದೆ ಕೆಲಸ ಮಾಡುವ ಇಂತಹ ವ್ಯಕ್ತಿಗಳು ನನಗೆ ಇಷ್ಟವಾಗುತ್ತಾರೆ. ಅಭಿವೃದ್ದಿ ವಿಷಯದಲ್ಲಿ ಯಾರೂ ರಾಜಕಾರಣ ಮಾಡಬಾರದು. ಅಂತಹರಿಗೆ ಅವರ ಕ್ಷೇತ್ರದಲ್ಲೇ ಗೌರವ ಸಿಗುವುದಿಲ್ಲ. ಭಾರತ ಮಾಲಾ ಯೋಜನೆಯಡಿ, ರಾಜ್ಯದ ಪ್ರತಿ ಜಿಲ್ಲೆಯ ರಸ್ತೆಗಳಿಗೆ ರಾಷ್ಟ್ರೀಯ ಹೆದ್ದಾರಿಗಳನ್ನು ಜೋಡಿಸಬೇಕು’ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು