ಹುಬ್ಬಳ್ಳಿ: ಅಮೃತ ನಿಲ್ದಾಣಗಳ ಯೋಜನೆಯಡಿ ದೇಶದ 103 ರೈಲು ನಿಲ್ದಾಣಗಳು ಪುನರಾಭಿವೃದ್ಧಿಯಾಗಿದ್ದು, ಅವುಗಳಲ್ಲಿ ರಾಜ್ಯದ ಧಾರವಾಡ, ಗದಗ, ಬಾಗಲಕೋಟೆ, ಗೋಕಾಕ ರೋಡ ರೈಲು ಮತ್ತು ಮುನಿರಾಬಾದ್ ನಿಲ್ದಾಣ ಕೂಡ ಸೇರಿದೆ. ಎಲ್ಲಾ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಿಡಿಯೊ ಕಾನ್ಫ್ರೆನ್ಸ್ ಮೂಲಕ ಉದ್ಘಾಟಿಸಿದರು.

ಬಾಗಲಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಮಾತನಾಡಿ, ಬಾರತ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಸಂಸ್ಥೆಯಲ್ಲಿ 50 ವಂದೇ ಭಾರತ್ ರೈಲುಗಳನ್ನು ನಿರ್ಮಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಾಗಲಕೋಟೆಗೂ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದರು.

‘₹1,110 ಕೋಟಿ ವೆಚ್ಚದಲ್ಲಿ 103 ರೈಲ್ವೆ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ₹7.50 ಲಕ್ಷ ಕೋಟಿ ವೆಚ್ಚದಲ್ಲಿ ರೈಲ್ವೆ ಮಾರ್ಗ ಹಾಗೂ ದೇಶದಲ್ಲಿ 670 ಕೆಳಸೇತುವೆ, 161 ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ.
₹2,000 ಕೋಟಿ ವೆಚ್ಚದಲ್ಲಿವಿದ್ಯುದ್ದೀಕರಣ ಪ್ರಕ್ರಿಯೆ ಪ್ರಗತಿ ಯಲ್ಲಿದೆ’ ಎಂದರು.

ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಮಾತನಾಡಿ, ‘ರಾಜ್ಯದಲ್ಲಿ ಪ್ರಸ್ತುತ ₹ 50,792 ಕೋಟಿ ವೆಚ್ಚದ ರೈಲ್ವೆ ಕಾಮಗಾರಿಗಳು ನಡೆದಿವೆ. 2025–26ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ₹ 7,564 ಕೋಟಿ ಅನುದಾನ ಹಂಚಿಕೆಯಾಗಿದೆ, 61 ನಿಲ್ದಾಣಗಳನ್ನು ವಿಶ್ವದರ್ಜೆಗೆ ಏರಿಸಲಾಗುವುದು’ಎಂದರು.

‘ಅಹಮದಾಬಾದ್–ಮುಂಬೈ ಮಾರ್ಗದಲ್ಲಿ ಬುಲೆಟ್ ರೈಲು ಸಂಚಾರಕ್ಕೆ ಕಾಮಗಾರಿ ತ್ವರಿತವಾಗಿ ನಡೆದಿದೆ. ಜರ್ಮನ್, ಜಪಾನ್ನಲ್ಲಿ ಇರುವ ವೇಗದ ರೈಲು ವ್ಯವಸ್ಥೆಯನ್ನು ಭಾರತದಲ್ಲೂ ಪರಿಚಯಿಸುವ ಗುರಿಯಿದೆ’
ಎಂದರು.

ಗದಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ‘ರಾಜ್ಯದ ವಿವಿಧೆಡೆ ಈವರೆಗೆ ₹51 ಸಾವಿರ ಕೋಟಿಯಷ್ಟು ವೆಚ್ಚದ ರೈಲ್ವೆ ಕೆಲಸಗಳು ನಡೆದಿದೆ. 2025–26ನೇ ಸಾಲಿಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ₹7,500 ಕೋಟಿ ಹಣ ಬಿಡುಗಡೆ ಮಾಡಿದೆ’ ಎಂದರು.

‘50 ವರ್ಷ ಅಧಿಕಾರದಲ್ಲಿದ್ದ ಕಾಂಗ್ರೆಸ್ ಅವಧಿಯಲ್ಲಿ 20 ಸಾವಿರ ಕಿ.ಮೀ. ರೈಲ್ವೆ ಮಾರ್ಗ
ವಿದ್ಯುದೀಕರಣಗೊಂಡಿದ್ದರೆ; ಬಿಜೆಪಿ ಅಧಿಕಾರಕ್ಕೆ ಬಂದ 10 ವರ್ಷಗಳಲ್ಲಿ 40 ಕಿ.ಮೀ. ರೈಲ್ವೆ ಮಾರ್ಗ ವಿದ್ಯುದೀಕರಣಗೊಂಡಿದೆ. ಇನ್ನೂ 68 ಸಾವಿರ ಕಿ.ಮೀ. ರೈಲು ಮಾರ್ಗ ವಿದ್ಯುದೀಕರಣಗೊಳಿಸುವ ಗುರಿಯಿದೆ’ ಎಂದರು.

ಮುನಿರಾಬಾದ್ ನವೀಕೃತ ರೈಲು ನಿಲ್ದಾಣ ಲೋಕಾರ್ಪಣೆ

ಕೊಪ್ಪಳ: ತಾಲ್ಲೂಕಿನ ಹುಲಿಗಿ ಗ್ರಾಮದಲ್ಲಿರುವ ಮುನಿರಾಬಾದ್ ರೈಲು ನಿಲ್ದಾಣವನ್ನು ಕೇಂದ್ರ ಸರ್ಕಾರದ ‘ಅಮೃತ್ ಭಾರತ್’ ಯೋಜನೆಯಡಿ ₹18.40 ಕೋಟಿ ವೆಚ್ಚದಲ್ಲಿ ಪುನರ್ ನವೀಕರಣ ಮಾಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಗುರುವಾರ ಉದ್ಘಾಟಿಸಿದರು. ಸ್ಥಳೀಯವಾಗಿ ನಡೆದ ಕಾರ್ಯಕ್ರಮವನ್ನು ಸಂಸದ ರಾಜಶೇಖರ ಹಿಟ್ನಾಳ ಉದ್ಘಾಟನೆ ಮಾಡಿದರು.

ಜಟಾಪಟಿ: ಕೇಂದ್ರ ಸರ್ಕಾರದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳ ಜೊತೆಗೆ ಕಾಂಗ್ರೆಸ್ ನಾಯಕರನ್ನೂ ವೇದಿಕೆ ಮೇಲೆ ಕೂಡಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.

‘ಸರ್ಕಾರದ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಬೇಕು. ರಾಜಕಾರಣ ಮಾಡುವುದು ಸರಿಯಲ್ಲ’ ಎಂದು ಬಿಜೆಪಿ ಮುಖಂಡರು ರೈಲ್ವೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ನಿಲ್ದಾಣ ಮುಂಭಾಗದಲ್ಲಿ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.

ಈ ವಿಷಯವನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಸಂಸದ ರಾಜಶೇಖರ ಹಿಟ್ನಾಳ, ‘ತಪ್ಪುಗಳಾಗಿದ್ದರೆ ಸರಿಪಡಿಸಲಾಗುವುದು’ ಎಂದರು. ಪ್ರಧಾನಿ ನಿಲ್ದಾಣ ಉದ್ಘಾಟನೆ ಮಾಡುವ ವೇಳೆಗೆ ಭಾಷಣ ಮುಗಿಸಿದ ಸಂಸದ ಹಿಟ್ನಾಳ ಹಾಗೂ ಕಾಂಗ್ರೆಸ್ ನಾಯಕರು ಕಾರ್ಯಕ್ರಮದಿಂದ ನಿರ್ಗಮಿಸಿದರು. ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕಾರ್ಯಕ್ರಮ ಮುಗಿಯುವ ತನಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.