ಹುಬ್ಬಳ್ಳಿ: ‘ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮಾನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಬಲ ಸಾಕ್ಷ್ಯಾಧಾರಗಳು ಲಭಿಸಿದ್ದು, 60 ದಿನಗಳ ಒಳಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು’ ಎಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (ಡಿಸಿಆರ್ಇ) ಡಿಜಿಪಿ ರಾಮಚಂದ್ರ ರಾವ್ ತಿಳಿಸಿದರು.

‘ಕೃತ್ಯ ನಡೆದ ವಿವೇಕಾನಂದ ದೊಡಮನಿ ಅವರ ಮನೆ ಮುಂಭಾಗದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಮಾನ್ಯಾ ಅವರನ್ನು ಕೊಲೆ ಮಾಡಿರುವ ದೃಶ್ಯಗಳು ಸಂಗ್ರಹವಾಗಿದೆ. ಇದರ ಜೊತೆಗೆ ಕೆಲವು ಆರೋಪಿಗಳ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದು ಡಿಜಿಟಲ್ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ’ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯಕ್ಕೆ ಹಾಗೂ ಸರ್ಕಾರಿ ವಿಶೇಷ ಅಭಿಯಂತರರ ನೇಮಕಕ್ಕೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಅದಕ್ಕೆ ಅನುಮತಿ ಸಿಗುವ ಸಾಧ್ಯತೆಯಿದೆ. ಸಂಗ್ರಹಿಸಿರುವ ಸಾಕ್ಷ್ಯಾಧಾರಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವರದಿ ಆಧರಿಸಿ ದೋಷಾರೋಪ ಪಟ್ಟಿ ಸಿದ್ಧಪಡಿಸುತ್ತೇವೆ’ ಎಂದರು.

‘ಎಫ್ಐಆರ್ನಲ್ಲಿ 14 ಮಂದಿಯ ಹೆಸರು ಹಾಗೂ 20 ಮಂದಿ ಇತರೆ ಎಂದು ಆರೋಪಿಗಳನ್ನು ನಮೂದಿಸಲಾಗಿದೆ. 8 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅಗತ್ಯವಿದ್ದರೆ ಉಳಿದವರನ್ನು ವಶಕ್ಕೆ ಪಡೆಯುತ್ತೇವೆ. ಇದು ಘೋರ ಅಪರಾಧವಾಗಿದ್ದು, ನೊಂದವರಿಗೆ ನ್ಯಾಯ ಕೊಡಿಸಲು ಯತ್ನಿಸಲಾಗುವುದು. ದೊಷಾರೋಪ ಪಟ್ಟಿ ಸಲ್ಲಿಕೆ ನಂತರ ವಿಚಾರಣೆ ಮುಗಿಸಲು ಕನಿಷ್ಠ ಮೂರು ವರ್ಷಗಳು ಬೇಕಾಗುತ್ತವೆ’ ಎಂದರು.

‘ದಲಿತ ದೌರ್ಜನ್ಯ ಪ್ರಕರಣ ನಿಯಂತ್ರಿಸಲು ಕಂದಾಯ, ಸಮಾಜ ಕಲ್ಯಾಣ ಮತ್ತು ಪೊಲೀಸ್ ಇಲಾಖೆ ಸಮನ್ವಯದಿಂದ ಕೆಲಸ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಹೆಚ್ಚಾಗಬೇಕು. ಈ ಕುರಿತು ಉನ್ನತ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಶೀಘ್ರ ಅನುಷ್ಠಾನಕ್ಕೆ ಬರಲಿದೆ’ ಎಂದರು.

ಧಾರವಾಡ ಎಸ್ಪಿ ಗುಂಜನ್ ಆರ್ಯ ಮಾತನಾಡಿ, ‘ಕೃತ್ಯಕ್ಕೂ ಮೊದಲು ಆರೋಪಿಗಳನ್ನು ಎರಡು ಬಾರಿ ಗ್ರಾಮೀಣ ಪೊಲೀಸ್ ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ, ಮುಚ್ಚಳಿಕೆ ಬರೆಸಿಕೊಳ್ಳಲಾಗಿತ್ತು. ಈಗಾಗಲೇ ಗ್ರಾಮದಲ್ಲಿ ಶಾಂತಿ ಸಭೆ ನಡೆದಿದ್ದು, ಮತ್ತೊಮ್ಮೆ ಸಭೆ ನಡೆಸಿ, ಸಂತ್ರಸ್ಥರನ್ನು ಆಪ್ತಸಮಾಲೊಚನೆಗೆ ಒಳಪಡಿಸಲಾಗುವುದು’ ಎಂದರು.

ಮಾನ್ಯಾ ಕೊಲೆ ಪ್ರಕರಣದ ಆರೋಪಿಗಳು ಹೊರಗೆ ಬಂದರೆ ಅವರ ಮೇಲೆ ಪೊಲೀಸರು ಸಂಪೂರ್ಣ ನಿಗಾವಹಿಸಿ ಮಾಹಿತಿ ಸಂಗ್ರಹಿಸುತ್ತ ಇರುತ್ತಾರೆ. ಸಂತ್ರಸ್ತರು ಆತಂಕ ಪಡುವ ಅಗತ್ಯವಿಲ್ಲ
ರಾಮಚಂದ್ರ ರಾವ್ ಡಿಜಿಪಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ(ಡಿಸಿಆರ್ಇ)

‘ಶಿಕ್ಷೆ ಪ್ರಮಾಣ ಶೇ 10 ಮಾತ್ರ’

‘ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ರಾಜ್ಯದಲ್ಲಿ ವರ್ಷಕ್ಕೆ 2300 ರಿಂದ 2500ರಷ್ಟು ಪ್ರಕರಣ ದಾಖಲಾಗುತ್ತಿದೆ. ಶೇ 10ರಷ್ಟು ಪ್ರಕರಣದಲ್ಲಿ ಮಾತ್ರ ಅಪರಾಧಿಗಳಿಗೆ ಶಿಕ್ಷೆಯಾಗುತ್ತವೆ. ಕಳೆದ ಹತ್ತು ವರ್ಷಗಳಲ್ಲಿ ಖುಲಾಸೆಯಾದ ಪ್ರಕರಣಗಳ ಕೋರ್ಟ್ ಆದೇಶ ಪ್ರತಿ ಸಂಗ್ರಹಿಸಿ ವಿಶ್ಲೇಷಣೆ ಮಾಡಲಾಗುತ್ತಿದೆ. ಅವುಗಳಲ್ಲಿ ದೂರುದಾರರೇ ಪ್ರಕರಣ ವಾಪಸ್ ಪಡೆದಿರುವುದು ಸಾಕ್ಷಿ ಹೇಳದಿರುವುದು ಸಾಕ್ಷಿದಾರರು ದೂರ ಇರುವುದು ಕಂಡು ಬಂದಿವೆ. ಹೀಗಾಗಿ ಶಿಕ್ಷೆ ಪ್ರಮಾಣ ಕಡಿಮೆಯಾಗುತ್ತಿದೆ’ ಎಂದು ಡಿಜಿಪಿ ರಾಮಚಂದ್ರ ರಾವ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.