ಹುಬ್ಬಳ್ಳಿ: 'ಕೃಷಿ ಉತ್ಪನ್ನ ಮಾರುಕಟ್ಟೆ ಶುಲ್ಕ ಹೆಚ್ಚಳ ವಿರೋಧಿಸಿ ಡಿ. 21ರಂದು ರಾಜ್ಯದಾದ್ಯಂತ ಎಪಿಎಂಸಿಯಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ, ಸಾಂಕೇತಿಕವಾಗಿ ಬಂದ್ ನಡೆಸಲು ನಿರ್ಧರಿಸಲಾಗಿದೆ' ಎಂದು ಎಪಿಎಂಸಿ ಕ್ರಿಯಾಸಮಿತಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ ಹೇಳಿದರು.

ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಶುಕ್ರವಾರ ನಡೆದ ಎಪಿಎಂಸಿ ವ್ಯಾಪಾರಸ್ಥರ ಸಭೆಯ ನಂತರ ಮಾತನಾಡಿದ ಅವರು, 'ಶೇ 35 ಇದ್ದ ಮಾರುಕಟ್ಟೆ ಶುಲ್ಕವನ್ನು ಸರ್ಕಾರ ಏಕಾಏಕಿ ಶೇ 1ಕ್ಕೆ ಹೆಚ್ಚಳ ಮಾಡಿದೆ. ಕೋವಿಡ್'ನಿಂದ ವ್ಯಾಪಾರ, ವಹಿವಾಟುಗಳು ಸರಿಯಾಗಿ ನಡೆಯದೆ ವರ್ತಕರು ತೀವ್ರ ಸಮಸ್ಯೆ ಅನುಭವಿಸಿದ್ದರು. ವ್ಯಾಪಾರ ಚೇತರಿಸಿಕೊಳ್ಳುತ್ತಿದೆ ಎನ್ನುತ್ತಿರುವಾಗ ಮಾರುಕಟ್ಟೆ ಶುಲ್ಕ ಹೆಚ್ಚಳ ಮಾಡಿರುವುದು ಸರಿಯಲ್ಲ. ಇದನ್ನು ವಿರೋಧಿಸಿ ಸೋಮವಾರ ರಾಜ್ಯದಾದ್ಯಂತ ಎಪಿಎಂಸಿ ಬಂದ್'ಗೆ ಕರೆ ನೀಡಲಾಗಿದೆ' ಎಂದರು.

'ಡಿ. 23ರಂದು ಬೆಂಗಳೂರಿನಲ್ಲಿ ಎಫ್.ಕೆ.ಸಿ.ಸಿ.ಐ ಹಾಗೂ ಕೆಸಿಸಿಐ ನೇತೃತ್ವದಲ್ಲಿ ರಾಜ್ಯದ ಎಪಿಎಂಸಿ ವರ್ತಕರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದೇವೆ. ನಂತರ ಅಧಿಕಾರಿಗಳಿಗೆ ಹಾಗೂ ಸಚಿವರಿಗೆ ಮನವಿ ಸಲ್ಲಿಸಿ ಶುಲ್ಕ ಹೆಚ್ಚಳ ಹಿಂಪಡೆಯಲು ವಿನಂತಿಸುತ್ತೇವೆ. ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಎಪಿಎಂಸಿ ಬಂದ್'ಗೆ ಕರೆ ನೀಡುತ್ತೇವೆ' ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.