ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುತಿ ಜಾತ್ರಾ ಮಹೋತ್ಸವ ಏ.16ರಿಂದ ಏ.24ರವರೆಗೆ

Published 15 ಏಪ್ರಿಲ್ 2024, 15:36 IST
Last Updated 15 ಏಪ್ರಿಲ್ 2024, 15:36 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಬಿಡನಾಳದ ಮಾರುತಿ ದೇವಸ್ಥಾನದ ಜಾತ್ರಾ ಮಹೋತ್ಸವ ಏ.16ರಿಂದ ಏ.24ರವರೆಗೆ ಜರುಗಲಿದೆ.

ಏ.16ರಿಂದ 22ರವರೆಗೆ ಪ್ರತಿದಿನ ಸಂಜೆ 7 ಗಂಟೆಗೆ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಕಾಲೊನಿಯ ಶಂಕ್ರಪ್ಪ ಅಡವಿ ಅವರ ಜಮೀನಿನಲ್ಲಿ ಮಣಕವಾಡ ಅನ್ನದಾನೇಶ್ವರ ಮಠದ ಅಭಿನವ ಮೃತ್ಯುಂಜಯ ಸ್ವಾಮೀಜಿ ಅವರಿಂದ ಆಧ್ಯಾತ್ಮಿಕ ಪ್ರವಚನ ನಡೆಯಲಿದೆ.

ಏ.19ರಂದು ಗ್ರಾಮದೇವತೆ ಮರಗಮ್ಮದೇವಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

ಏ.23ರಂದು ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಆಂಜನೇಯ ದೇವರ ತೊಟ್ಟಿಲೋತ್ಸವ, ಹೋಮ ಹಾಗೂ ಸಂಜೆ 5.15ಕ್ಕೆ ಹನುಮಂತ ದೇವರ ರಥೋತ್ಸವ ನಡೆಯಲಿದೆ. ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ.

ಏ.24ರಂದು ಬೆಳಿಗ್ಗೆ 11ಕ್ಕೆ ಮಹಿಳೆಯರಿಂದ ರಥೋತ್ಸವಕ್ಕೆ ಚಾಲನೆ ನೀಡಲಾಗುವುದು. ಮೂರುಸಾವಿರ ಮಠದ ಗುರುಸಿದ್ಧ  ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT