ಬುಧವಾರ, ಆಗಸ್ಟ್ 10, 2022
24 °C
ಒಂದೇ ಸೂರಿನಡಿ ಪಾಲಿಕೆಯ ಸೇವೆಗಳನ್ನು ನೀಡಲು ಪ್ರತ್ಯೇಕ ಸಾಫ್ಟ್‌ವೇರ್ ಅಭಿವೃದ್ಧಿ

ಮಹಾನಗರ ಪಾಲಿಕೆ ಸಾಮಾನ್ಯ ಸಭೆಯ ಭಾಷಣದಲ್ಲಿ ಮೇಯರ್ ಈರೇಶ ಅಂಚಟಗೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ‌ ಒದಗಿಸಲು ಪ್ರತ್ಯೇಕ ಸಾಫ್ಟ್‌ವೇರ್ ಅಭಿವೃದ್ಧಿಪಡಿ, ಲಾಗುವುದು ಎಂದು‌ ಹುಬ್ಬಳ್ಳಿ- ಧಾರವಾಡ ಮೇಯರ್ ಈರೇಶ ಅಂಚಟಗೇರಿ ಹೇಳಿದರು.

ಹುಬ್ಬಳ್ಳಿಯಲ್ಲಿ ಗುರುವಾರ ನಡೆದ ಮಹಾನಗರ ಪಾಲಿಕೆಯ  ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಮಹಾನಗರದ ವೇಗವಾದ ಅಭಿವೃದ್ಧಿಗೆ ಪೂರಕವಾಗಿ ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದರು. 

ಮೇಯರ್ ಭಾಷಣಕ್ಕೆ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ಉಪ ಮೇಯರ್ ಉಮಾ‌ ಮುಕುಂದ, ಆಯುಕ್ತ ಡಾ. ಗೋಪಾಲಕೃಷ್ಣ ಬಿ, ಹೆಚ್ಚುವರಿ ಆಯುಕ್ತ ಶಂಕಾರನಂದ ಬನಶಂಕರಿ, ಅಧಿಕಾರಿಗಳು ಹಾಗುಹ ಸದಸ್ಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.