ಧಾರವಾಡ: ‘ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

‘ಗೃಹ ಜ್ಯೋತಿ ಫಲಾನುಭವಿಗಳಿಗೆ ಸೌಲಭ್ಯ ಸಿಗಬೇಕು. ಗ್ರಾಮೀಣ ಭಾಗದಲ್ಲಿ ಹಲವು ಲೈನ್ಮೆನ್ಗಳು ಸಹಾಯಕರನ್ನು ನೇಮಿಸಿಕೊಂಡು ಕೆಲಸ ಮಾಡಿಸುತ್ತಾರೆಂಬ ದೂರುಗಳಿವೆ. ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಈ ಬಗ್ಗೆ ಪರಿಶೀಲಿಸಿ, ಕ್ರಮ ವಹಿಸಬೇಕು’ ಎಂದರು.

‘ಪಡಿತರ ಸರಿಯಾಗಿ ವಿತರಣೆ ಮಾಡದ, ಅಕ್ರಮ ನಡೆಸುವ ನ್ಯಾಯಬೆಲೆ ಅಂಗಡಿಗಳಿದ್ದರೆ ಪತ್ತೆ ಹಚ್ಚಿ ಪರವಾನಗಿ ರದ್ದುಗೊಳಿಸಬೇಕು’ ಎಂದು ಹೇಳಿದರು.

‘ಗೃಹಲಕ್ಷ್ಮಿ ಯೋಜನೆಯ ಮೇ ತಿಂಗಳ ಹಣ ಎರಡು ದಿನಗಳಲ್ಲಿ ಜಮೆ ಆಗಲಿದೆ’ ಎಂದು ಅಧಿಕಾರಿಗಳು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಉಪಾಧ್ಯಕ್ಷ ಮುರಗಯ್ಯ ವಿರಕ್ತಮಠ, ಶಾಂತಪ್ಪ ಅಕ್ಕಿ, ರೇಹನ್ ರಝಾ ಐನಾಪೂರಿ, ರತ್ನಾ ತೇಗೂರಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.