ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಮೇಕೆದಾಟು ಎನ್ನುತ್ತ ಪಾದಯಾತ್ರೆ, ಪ್ರತಿಭಟನೆಯ ನಾಟಕ ಆಡುತ್ತಿದೆ. ಅದನ್ನು ಬಿಟ್ಟು ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಜೊತೆ ಕೈ ಜೋಡಿಸಲಿ ಎಂದು ಶಾಸಕ ಜಗದೀಶ ಶೆಟ್ಟರ್ ಆಗ್ರಹಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಅನಯಷ್ಠಾನದಲ್ಲಿ ಕಾನೂನಿನ ತೊಡಕುಗಳಿವೆ. ಎಲ್ಲ ಪಕ್ಷದವರು ಕುಳಿತು ಸಮಾಲೋಚಿಸಿ, ಪರಿಹಾರ ಕಂಡುಕೊಳ್ಳಬೇಕಿದೆ. ಆದರೆ ಕಾಂಗ್ರೆಸ್ ಪಾದಯಾತ್ರೆ ಎನ್ನುತ್ತ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಈ ಹಿಂದೆ ಸರ್ಕಾರ ನಡೆಸಿದವರು. ತಮ್ಮ ಸರ್ಕಾರವಿದ್ದಾಗ ಡಿಪಿಆರ್ ಮಾಡಿದ್ದೇವೆ ಎನ್ನುವ ಅವರು, ಆಗಲೇ ಯಾಕೆ ಯೋಜನೆ ಅನುಷ್ಠಾನಗೊಳಿಸಿಲ್ಲ.
ವಿರೋಧ ಪಕ್ಷದಲ್ಲಿದ್ದಾಗ ಒಂದು ನಡವಳಿಕೆ, ಆಡಳಿತ ಪಕ್ಷದಲ್ಲಿದ್ದಾಗ ಮತ್ತೊಂದು ನಡವಳಿಕೆ ಸರಿಯಲ್ಲ. ವಿರೋಧ ಪಕ್ಷದವರು ರಾಜಕಾರಣ ಮಾಡಿದರೆ, ಬೇರೆ ರಾಜ್ಯದವರು ಅದನ್ನು ದುರುಪಯೋಗ ಪಡಿಸಿಕೊಳ್ಳುತ್ತಾರೆ. ಈ ಸೂಕ್ಷ್ಮತೆ ಅರಿತುಕೊಳ್ಳಬೇಕು. ಮೇಕೆದಾಟು ಯೋಜನೆ ಅನುಷ್ಠಾನ ರಾಜ್ಯದ ಹಕ್ಕಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.