ಹುಬ್ಬಳ್ಳಿ: ಒಣಮೆಣಸಿನಕಾಯಿ ದರ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಅನುಕೂಲ ಕಲ್ಪಿಸಲು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯ ಬೆಲೆ ವ್ಯತ್ಯಾಸ ಪಾವತಿ (ಪಿಡಿಪಿಎಸ್) ಯೋಜನೆಯಡಿ ಒಣಮೆಣಸಿನಕಾಯಿ ಖರೀದಿಸುವ ಕುರಿತು ಸರ್ಕಾರವು ಬೆಲೆ ವ್ಯತ್ಯಾಸ ಪಾವತಿ ಯೋಜನೆ ಅನುಷ್ಠಾನಕ್ಕೆ ಮುಂದಾಗಿದೆ.

2024-25ನೇ ಸಾಲಿನಲ್ಲಿ ಈ ಯೋಜನೆಯಡಿ 73,732 ಮೆಟ್ರಿಕ್ ಟನ್ ಪ್ರಮಾಣದ ಒಣಮೆಣಸಿನಕಾಯಿ ಖರೀದಿಸಲು ಮಾರುಕಟ್ಟೆ ಮಧ್ಯಪ್ರದೇಶ ದರವನ್ನು (ಎಂಐಪಿ) ಪ್ರತಿ ಕ್ವಿಂಟಲ್ಗೆ ₹10,589.20 ನಿಗದಿಪಡಿಸಿದೆ.

ಬಳ್ಳಾರಿ, ಗದಗ, ಧಾರವಾಡ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ತುಮಕೂರು, ಕಲಬುರಗಿ, ವಿಜಯನಗರ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 2024-25ನೇ ಸಾಲಿನಲ್ಲಿ ಒಣಮೆಣಸಿನಕಾಯಿ ಬೆಳೆ ಬೆಳೆದ ರೈತರು ಈ ಪ್ರಯೋಜನ
ಪಡೆಯಬಹುದು.

ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿದ ರೈತರು, ಮೆಣಸಿನಕಾಯಿ ಬೆಳೆದ ದಾಖಲಾತಿಯೊಂದಿಗೆ ಹತ್ತಿರದ ಜಿಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ನೋಂದಣಿ ಮಾಡಿಕೊಂಡು ಯೋಜನೆಯ ಲಾಭ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಥವಾ ಕೃಷಿ ಮಾರುಕಟ್ಟೆ ಇಲಾಖೆ ಅಥವಾ ತೋಟಗಾರಿಕೆ ಇಲಾಖೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.