ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಲೀನಕ್ಕೂ ಮುಂಚೆ ಸೌಲಭ್ಯ ಖಾತ್ರಿ ಸಿಗಬೇಕು: ಶರ್ಮಾ

Last Updated 9 ಜುಲೈ 2019, 16:05 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರನ್ನು ಸರ್ಕಾರಿ ನೌಕರರಾಗಿ ವಿಲೀನಗೊಳಿಸುವುದು ಇಂದಿನ ಅಗತ್ಯವಾಗಿದೆ’ ಎಂದು ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಲದ ರಾಜ್ಯ ಘಟಕದ ಅಧ್ಯಕ್ಷ ಡಾ. ಕೆ.ಎಸ್. ಶರ್ಮಾ ಹೇಳಿದರು.

ಹುಬ್ಬಳ್ಳಿಯ ಶರ್ಮಾ ದರ್ಶನ ಭವನದಲ್ಲಿ ಇತ್ತೀಚೆಗೆ ಈಶಾನ್ಯ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಮುಖಂಡರ ಹಾಗೂ ಪ್ರತಿನಿಧಿಗಳ ಜಂಟಿ ಸಭೆಯಲ್ಲಿ ಅವರು ಮಾತನಾಡಿದರು.

‘ವಿಲೀನಕ್ಕೂ ಮುಂಚೆ ಸಾರಿಗೆ ನಿಗಮಗಳ ಆಡಳಿತ ವರ್ಗ ನೌಕರರ ಸಂಘಟನೆಗಳ ಜತೆ ಮಾಡಿಕೊಂಡಿರುವ ಕೈಗಾರಿಕಾ ಒಪ್ಪಂದಗಳಲ್ಲಿ, ನೌಕರರಿಗೆ ದೊರೆತಿರುವ ಎಲ್ಲಾ ಸೌಲಭ್ಯಗಳನ್ನು ಮುಂದುವರಿಸುವುದನ್ನು ಖಾತ್ರಿಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಕೈಗಾರಿಕಾ ಒಪ್ಪಂದಗಳ ಮೂಲಕ ಕಳೆದ ಅರವತ್ತು ವರ್ಷಗಳಲ್ಲಿ ಸಾರಿಗೆ ನೌಕರರಿಗೆ ಮಿತಿ ಇಲ್ಲದ ಉಪಧನದ ಪಾವತಿ, ವಾರ್ಷಿಕ ಬಡ್ತಿಯ ವೇತನ ಶ್ರೇಣಿ, ಚಾಲಕರು ಹಾಗೂ ನಿರ್ವಾಹಕರಿಗೆ ವಿಶೇಷ ಭತ್ಯೆ, ಪ್ರೋತ್ಸಾಹಧನದ ಯೋಜನೆಗಳು, 4 ವರ್ಷಕ್ಕೊಮ್ಮೆ ಕಡ್ಡಾಯವಾಗಿ ವೇತನ ಪರಿಷ್ಕರಣೆ ಸೇರಿದಂತೆ, ಹಲವು ಸೌಲಭ್ಯಗಳನ್ನು ಒಪ್ಪಂದದ ಮೂಲಕ ಪಡೆದುಕೊಳ್ಳಲಾಗಿದೆ. ಈ ಸೌಲಭ್ಯಗಳಲ್ಲಿ ಯಾವುದೇ ವ್ಯತ್ಯಾಸವಾಗದಂತೆ ನೋಡಿಕೊಳ್ಳಬೇಕಾದ ಅನಿವಾರ್ಯತೆ ಸಾರಿಗೆ ನೌಕರಿರಿಗಿದೆ’ ಎಂದು ಹೇಳಿದರು.

ಸಭೆಯಲ್ಲಿ ಎರಡೂ ನಿಗಮಗಳ 500ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು. ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆಯನ್ನು ಮಹಾಮಂಡಲವು ಸರ್ಕಾರದ ಮುಂದೆ ಮಂಡಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರ ಸಂಘಟನೆ ಮುಖಂಡರಾದ ಚಂದ್ರಕಾಂತ ಗದಗಿ, ಬಸವರಾಜ ಕಣ್ಣಿ, ವಾಯುವ್ಯ ಕರ್ನಾಟಕದ ಮುಖಂಡರಾದ ಪ್ರಕಾಶ ಮೂರ್ತಿ, ವಿ.ಬಿ. ಕುಲಕರ್ಣಿ, ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ಹಾಗೂ ಖಜಾಂಚಿ ದೇವರಾಜ ಅರಸು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT