ಶನಿವಾರ, ಜೂನ್ 25, 2022
25 °C

ಬಸವರಾಜ ಹೊರಟ್ಟಿಗೆ ಟಿಕೆಟ್ ನೀಡುವ ಬಗ್ಗೆ ಬಿಜೆಪಿಯಲ್ಲಿ ಅಪಸ್ವರವಿಲ್ಲ: ಹಾಲಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: 'ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಸವರಾಜ ಹೊರಟ್ಟಿ ಅವರಿಗೆ ಟಿಕೆಟ್ ನೀಡುವ ಕುರಿತು ಬಿಜೆಪಿಯ ಯಾವ ನಾಯಕರಲ್ಲೂ ಅಪಸ್ವರವಿಲ್ಲ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಈ ಭಾಗದ ಮುಖಂಡರ ಹಾಗೂ ವರಿಷ್ಠರು ಸೇರಿ ಹೊರಟ್ಟಿ ಅವರನ್ನು ಆಯ್ಕೆ ಮಾಡಿದ್ದಾರೆ' ಎಂದರು.

'ನಮ್ಮದು ದೊಡ್ಡ ಹಾಗೂ ಶಿಸ್ತಿನ ಪಕ್ಷ, ಮುಖಂಡರಲ್ಲಿ, ಕಾರ್ಯಕರ್ತರಲ್ಲಿ ಚುನಾವಣೆಗೆ ನಿಲ್ಲುವ ಆಸಕ್ತಿ ಸಹಜವಾಗಿ ಇರುತ್ತದೆ. ಎಲ್ಲ ಆಕಾಂಕ್ಷಿಗಳಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲ, ಅದು ಒಬ್ಬರಿಗೆ ಮಾತ್ರ ಸಿಗುತ್ತದೆ' ಎಂದು ಪ್ರತಿಕ್ರಿಯಿಸಿದರು.

'ರಾಜ್ಯಸಭಾ ಸದಸ್ಯರ ಆಯ್ಕೆ ಕುರಿತು ವರಿಷ್ಠರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ದೆಹಲಿ ಕರೆಸಿಕೊಂಡಿದ್ದರು. ಸಚಿವ ಸಂಪುಟ ಬದಲಾವಣೆ ಬಗ್ಗೆ ಯಾರೂ ಹೇಳಿಕೆ ನೀಡಿಲ್ಲ. ಖಾಲಿ ಇರುವ ಸಚಿವ ಸ್ಥಾನ ಭರ್ತಿ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ' ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು