ಸೋಮವಾರ, ಜೂನ್ 27, 2022
24 °C

ಮುಖ್ಯಮಂತ್ರಿ ಬದಲಾವಣೆ ಚರ್ಚೆಯಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆ: ಸಚಿವ ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: 'ಮುಖ್ಯಮಂತ್ರಿ ಬದಲಾವಣೆ ವಿಷಯ ಪದೇ ಪದೇ ಯಾಕೆ ಚರ್ಚೆ ಆಗುತ್ತಿದೆ ಎಂದು ತಿಳಿಯುತ್ತಿಲ್ಲ. ಇದರಿಂದ ಸರ್ಕಾರಕ್ಕೂ ಹಾಗೂ ಪಕ್ಷದ ವರ್ಚಸ್ಸಿಗೂ ಧಕ್ಕೆ ಆಗುತ್ತಿದೆ' ಎಂದು ಸಚಿವ ಜಗದೀಶ ಶೆಟ್ಟರ್ ಪ್ರತಿಕ್ರಿಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಇಂತಹ ಚರ್ಚೆ, ಚಟುವಟಿಕೆಗಳಿಂದ ನಮಗೂ ಕೆಲಸ ಮಾಡಲು ಆಗುತ್ತಿಲ್ಲ. ಇದು ಸರ್ಕಾರದ ಸಂಪೂರ್ಣ ಆಡಳಿತಕ್ಕೆ ಹೊಡೆತ ಬಿಳುತ್ತಿದೆ' ಎಂದರು.

'ಬಿ.ಎಸ್. ಯಡಿಯೂರಪ್ಪ ಮೊದಲಿನಿಂದಲೂ ಪಕ್ಷ ಕಟ್ಟಿ ಬೆಳೆಸಿದವರು. ಅದಕ್ಕಾಗಿ ಅವರು ವರಿಷ್ಠರು ಹೇಳಿದಂತೆ ಕೇಳುತ್ತೇನೆ ಎಂದಿದ್ದಾರೆ. ಆ ಮಾತಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ' ಎಂದು ಹೇಳಿದರು.

ಇದನ್ನೂ ಓದಿ: 

'5-6 ತಿಂಗಳಿಂದ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ‌. ಇದು ಎಲ್ಲಿ ಹುಟ್ಟಿತು ಎಂದು ತಿಳಿಯುತ್ತಿಲ್ಲ. ಈಗ ನಾಯಕತ್ವ ಬದಲಾವಣೆ ಬಗ್ಗರ ವರಿಷ್ಠರು ಮತ್ತು ನಮ್ಮ ಹಂತದಲ್ಲಿ ಚರ್ಚೆಯೇ ನಡೆದಿಲ್ಲ. ಎಲ್ಲ ವ್ಯವಸ್ಥೆಯಲ್ಲಿ ಪರ್ಯಾಯ ನಾಯಕರು ಇರುತ್ತಾರೆ. ಅದನ್ನೇ ಸಿ.ಎಂ ಹೇಳಿದ್ದಾರೆ. ವಯಸ್ಸು ಅವರ ಕೆಲಸಕ್ಕೆ ಅಡ್ಡಿ ಬಂದಿಲ್ಲ. ಅಲ್ಲದೆ, ಸಹಿ ಸಂಗ್ರಹ ವಿಚಾರ ನನ್ನ ಗಮನಕ್ಕೆ ಬಂದಿಲ್ಲ' ಎಂದು ಹೇಳಿದರು.

'ಕೊರೊನಾ ಸೋಂಕಿತರ ಪ್ರಮಾಣ ಶೇ 5ಕ್ಕಿಂತ ಕಡಿಮೆ ಬರೋವರರೆಗೂ ಲಾಕ್‌ಡೌನ್‌ ತೆರವು ಮಾಡುವುದಿಲ್ಲ. ಜೂನ್‌ 14ರ ನಂತರ ಪರಿಸ್ಥಿತಿ ನೋಡಿಕೊಂಡು ಹಂತಹಂತವಾಗಿ ಲಾಕ್‌ಡೌನ್‌ ಸಡಿಲಿಕೆ ಮಾಡಲಾಗುವುದು' ಎಂದು ಶೆಟ್ಟರ್ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು