ಶನಿವಾರ, ಜುಲೈ 24, 2021
25 °C

ಹುಬ್ಬಳ್ಳಿ | ಅಂತರ ಕಾಯ್ದಿಕೊಳ್ಳಿ, ಕೊರೊನಾ ಓಡಿಸಿ: ಜಗದೀಶ ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಅಂತರ ಕಾಯ್ದಕೊಳ್ಳುವ, ಸ್ಯಾನಿಟೈಸರ್‌ ಉಪಯೋಗಿಸುವ ಮೂಲಕ ದೇಶವನ್ನು ಕೊರೊನಾ ಮುಕ್ತವಾಗಿಸಲು ಎಲ್ಲರು ಕೈಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಮನವಿ ಮಾಡಿದರು.

ಗುರುವಾರ ಹುಬ್ಬಳ್ಳಿಯ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ‘ಮಾಸ್ಕ್‌ ಡೇ’ ಕಾರ್ಯಕ್ರಮ ಉದ್ಘಾಟಿಸಿದ ಅವರು, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಜನರೂ ಅದಕ್ಕೆ ಸಹಕಾರ ನೀಡಬೇಕು ಎಂದರು.

ಲಾಕ್‌ಡೌನ್‌ ಸಡಿಲಿಕೆ ಮೂಲಕ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗಿದೆ. ಆರೋಗ್ಯ ಸೌಲಭ್ಯಗಳ ಹೆಚ್ಚಳಕ್ಕೂ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ವಿಧಾನ ಪರಿಷತ್‌ ಚುನಾವಣೆಯ ಟಿಕೆಟ್‌ ಹಂಚಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿಧಾನ ಪರಿಷತ್‌ ಟಿಕೆಟ್‌ ಹಂಚಿಕೆಯಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿದೆ. ಅದನ್ನು ಪಾಲಿಸುವುದು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ನಮ್ಮೆಲ್ಲರ ಕರ್ತವ್ಯ ಎಂದರು.

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಜಿಲ್ಲಾಧಿಕಾರಿ ದೀಪಾ ಚೋಳನ್‌, ತಹಶೀಲ್ದಾರ್‌ ಶಶಿಧರ ಮಾಡ್ಯಾಳ, ಮುಖಂಡರಾದ ಡಿ.ಕೆ. ಚವ್ಹಾಣ, ರವಿ ನಾಯ್ಕ ಇದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು