ಗುರುವಾರ , ಅಕ್ಟೋಬರ್ 22, 2020
27 °C

ಹುಬ್ಬಳ್ಳಿ: ಕ್ಯಾಮೆರಾಮ್ಯಾನ್ ಮನೆಗೆ ಸಚಿವ ಜಗದೀಶ ಶೆಟ್ಟರ್ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Jagadish Shettar

ಹುಬ್ಬಳ್ಳಿ: ಬೈಕ್ ಅಪಘಾತದಲ್ಲಿ ಮೃತಪಟ್ಟ ಹುಬ್ಬಳ್ಳಿಯ ಪವರ್ ಟಿ.ವಿ ಸುದ್ದಿವಾಹಿನಿಯ ಕ್ಯಾಮೆರಾಮ್ಯಾನ್ ಸುನೀಲ ಪಾಚಂ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮಂಗಳವಾರ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಬಳಿಕ ವೈಯಕ್ತಿಕವಾಗಿ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದರು. 

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶೆಟ್ಟರ್, ‘ಸುನೀಲ ಲವಲವಿಕೆಯ ಹುಡುಗನಾಗಿದ್ದ. ಅನೇಕ ಸಲ ಅವರನ್ನು ನೋಡಿದ್ದೇನೆ. ಆತನ ಆಕಾಲಿಕ ಸಾವು ನೋವುಂಟು ಮಾಡಿದೆ’ ಎಂದರು.

ಬಿಜೆಪಿ ಜಿಲ್ಲಾ ರೈತ ಮೋರ್ಚಾ ಘಟಕದ ಅಧ್ಯಕ್ಷ ಈಶ್ವರಗೌಡ ಪಾಟೀಲ, ರವಿ ಕಲಾಲ, ಸಂಗೀತಾ ಬದ್ದಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು