ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ನಿವೇಶನ ವಾಪಸ್‌ ಕೊಟ್ಟರೆ ತಪ್ಪೇನು: ಸಚಿವ ಸಂತೋಷ್‌ ಲಾಡ್‌

Published : 2 ಅಕ್ಟೋಬರ್ 2024, 19:12 IST
Last Updated : 2 ಅಕ್ಟೋಬರ್ 2024, 19:12 IST
ಫಾಲೋ ಮಾಡಿ
Comments

ಧಾರವಾಡ: ‘ಮುಡಾ ಹಂಚಿಕೆ ಮಾಡಿದ್ದ ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ‌ ವಾಪಸ್‌ ನೀಡಿದ್ದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯ ಅವರ ಗೌರವ ಮತ್ತು ಪ್ರತಿಷ್ಠೆ ತುಂಬಾ ಮುಖ್ಯ. ಅದಕ್ಕೆ ನಿವೇಶನಗಳನ್ನು ವಾಪಸ್‌ ನೀಡಿದ್ದಾರೆ’ ಎಂದು ಸಚಿವ ಸಂತೋಷ್‌ ಲಾಡ್‌ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯವರೇ ನಿವೇಶನಗಳನ್ನು ಹಂಚಿಕೆ ಮಾಡಿದ್ದರು. ನಿವೇಶನಗಳನ್ನು ವಾಪಸ್‌ ನೀಡಿದ್ದಕ್ಕೆ ‘ಯು ಟರ್ನ್‌’ ಎಂದರೆ ಏನರ್ಥ? ನಿವೇಶನಗಳನ್ನು ವಾಪಸ್‌ ನೀಡಬಾರದು ಎಂಬ ಕಾನೂನು ಇದೆಯೇ’ ಎಂದು ಪ್ರಶ್ನಿಸಿದರು.

‘ಸಿದ್ದರಾಮಯ್ಯ ಅವರ ಪತ್ನಿ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡಿಲ್ಲ. ಅವರ ವಿರುದ್ಧ ಲೋಕಾಯುಕ್ತ ಮತ್ತು ಇ.ಡಿ (ಜಾರಿ ನಿರ್ದೇಶನಾಲಯ) ತನಿಖೆ ನಡೆದಿದೆ. ಇ.ಡಿ ಬಳಸಿಕೊಂಡು ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿಯವರು ಒತ್ತಾಯಿಸುವುದು ರಾಜಕೀಯ ಕುತಂತ್ರ’ ಎಂದರು.

‘ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ₹ 8.5 ಸಾವಿರ ಕೋಟಿ ಹಗರಣ ನಡೆದಿದೆ. ಚುನಾವಣಾ ಬಾಂಡ್‌ನಲ್ಲಿ ಬಿಜೆಪಿಗೆ ಶೇ 60 ದೇಣಿಗೆ ಸಿಕ್ಕಿದೆ. ಇದು ಬಿಜೆಪಿಯವರು ಮಾಡಿದ ವಂಚನೆ. ಈ ವಿಷಯದಲ್ಲಿ ಇ.ಡಿ ಏಕೆ ಪ್ರವೇಶಿಸಿಲ್ಲ? ಕೇಂದ್ರದಲ್ಲಿ 29 ಸಚಿವರ ವಿರುದ್ಧ ಕೊಲೆ, ಅತ್ಯಾಚಾರ, ಕ್ರಿಮಿನಲ್‌ ಪ್ರಕರಣಗಳಿವೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧವೂ ಪ್ರಕರಣ ಇದೆ. ಈ ಸಚಿವರು ರಾಜೀನಾಮೆ ಕೊಡಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT