ಧಾರವಾಡ: ನಿರುದ್ಯೋಗಿಗಳು, ಯುವಜನರು ಉದ್ಯೋಗ ಮೇಳವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಕೌಶಲ ಮಿಶನ್, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ವತಿಯಿಂದ ಮಂಗಳವಾರ ಕರ್ನಾಟಕ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಉದ್ಯೋಗ ಮೇಳದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಉದ್ಯೋಗಾಕಾಂಕ್ಷಿಗಳಿಗೆ ನೇರವಾಗಿ ಉದ್ಯೋಗದಾತರನ್ನು ಭೇಟಿ ಮಾಡಿಸಿ ಉದ್ಯೋಗ ಕಲ್ಪಿಸುವುದುದು ಉದ್ಯೋಗ ಮೇಳದ ಮುಖ್ಯ ಉದ್ದೇಶವಾಗಿದೆ. ಸರ್ಕಾರವು ಯುವಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಬದ್ಧವಾಗಿದ್ದು, ಈಗಾಗಲೇ 40 ಸಾವಿರಕ್ಕೂ ಹೆಚ್ಚು ಉದ್ಯೋಗಗಳಿಗೆ ನೇಮಕಾತಿ ನಡೆಸಿದೆ’ ಎಂದರು.

ಜಿಲ್ಲೆಯ ಉದ್ಯೋಗ ಮೇಳದಲ್ಲಿ ನಿರುದ್ಯೋಗ ಮತ್ತು ಆಸಕ್ತ ಯುವಕ, ಯುವತಿಯರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾಮಟ್ಡದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುತ್ತದೆ. ಉದ್ಯೋಗಕ್ಕೆ ಹಾಜರಾದ ಅಭ್ಯರ್ಥಿಗಳಿಂದ ಪ್ರತಿಕ್ರಿಯೆ ಪಡೆಯಲಾಗುತ್ತದೆ. ಈ ಕುರಿತು ಕ್ರಮ ವಹಿಸಲು ಕೌಶಲಾಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್. ಆರ್. ಪಾಟೀಲ, ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಮುಖ್ಯ ಯೋಜನಾ ಅಧಿಕಾರಿ ದೀಪಕ ಮಡಿವಾಳರ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.