ಸೋಮವಾರ, ಜನವರಿ 17, 2022
19 °C

ಅಳ್ನಾವರ ಅಭಿವೃದ್ಧಿಗೆ ಬದ್ಧ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಳ್ನಾವರ: ಹೊಸ ತಾಲ್ಲೂಕು ಕೇಂದ್ರವಾದ ಅಳ್ನಾವರ ಪಟ್ಟಣದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆಗೆ ಶ್ರಮಿಸುವೆ ಎಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ಇಲ್ಲಿನ ಪಟ್ಟಣ ಪಂಚಾಯ್ತಿ ವತಿಯಿಂದ ಮಂಗಳವಾರ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಈ ಭಾಗದ ಸಮಸ್ಯೆಗಳ ಪಟ್ಟಿ ಮಾಡಿಕೊಂಡು ಶಾಸಕ ನಿಂಬಣ್ಣವರ ನೇತೃತ್ವದಲ್ಲಿ ಪಟ್ಟಣ ಪಂಚಾಯ್ತಿ ಸದಸ್ಯರ ನಿಯೋಗ ಬೆಂಗಳೂರಿಗೆ ಕರೆದುಕೊಡು ಹೋಗಿ ಪೌರಾಡಳಿತ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ಏರ್ಪಡಿಸಿ ವಿಶೇಷ ಪ್ಯಾಕೇಜ್ ತರಲು ಶ್ರಮಿಸುವೆ ಎಂದರು.

ರಾಜ್ಯದ ಎಲ್ಲ ಪಟ್ಟಣ ಪಂಚಾಯ್ತಿ, ಪುರಸಭೆ ಹಾಗೂ ನಗರ ಸಭೆಗಳ ಅಭಿವೃದ್ಧಿಗೆ ನಗರೋತ್ಥಾನ ಸೇರಿ ವಿವಿಧ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ವಿಶೇಷ ಅನುದಾನ ನೀಡಲು ಸರ್ಕಾರ ತೀರ್ಮಾನಿಸಿದೆ. ಅಳ್ನಾವರ ಪಟ್ಟಣದ ಅಭಿವೃದ್ಧಿಗೆ ₹ 5 ಕೋಟಿ ವಿಶೇಷ ಅನುದಾನ ನೀಡಲಾಗುವುದು. ಹೊಸ ತಾಲ್ಲೂಕಿಗೆ ಸಂಬಂಧಿಸಿದ ಕಚೇರಿಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಗುವುದು ಎಂದು ಹೇಳಿದರು.

ಶಾಸಕ ಸಿ. ಎಂ. ನಿಂಬಣ್ಣವರ ಮಾತನಾಡಿದರು.

ಮನವಿ: ಅಳ್ನಾವರ ಮಲೆನಾಡು ಪ್ರದೇಶದ ವ್ಯಾಪ್ತಿಗೆ ಒಳಪಟ್ಟಿದೆ. ಅತಿವೃಷ್ಟಿಯಿಂದ ರಸ್ತೆ, ಚರಂಡಿ ಸಂಪೂರ್ಣ ಹಾಳಾಗಿದೆ. ಕುಡಿಯುವ ನೀರಿನ ಮೂಲವಾದ ಡೌಗಿ ನಾಲಾ ಬಾಂದಾರ ಕೊಚ್ಚಿ ಹೋಗಿದೆ. ಪಟ್ಟಣದ ಅಭಿವೃದ್ದಿಗೆ ತಯಾರಿಸಿದ ₹ 28.17 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಅನುದಾನ  ಬಿಡುಗಡೆ ಮಾಡಿಸಿ ಎಂದು ಪಟ್ಟಣ ಪಂಚಾಯ್ತಿ ಸದಸ್ಯರು ಮನವಿ ಸಲ್ಲಿಸಿದರು.

ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಮಂಗಳಾ ರವಳಪ್ಪನವರ, ಉಪಾಧ್ಯಕ್ಷ ನದೀಮ ಕಾಂಟ್ರ್ಯಾಕ್ಟರ್, ಸ್ಥಾಯಿ ಸಮಿತಿ ಅಧ್ಯಕ್ಷ ರಾಜು ಯಲಕಪಾಟಿ, ಪಟ್ಟಣ ಪಂಚಾಯ್ತಿ ಸದಸ್ಯರು, ತಹಶೀಲ್ದಾರ್ ಅಮರೇಶ ಪಮ್ಮಾರ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.