ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಾವರಿ ಕಾಮಗಾರಿ: ಡ್ರೋಣ್ ಸಮೀಕ್ಷೆಗೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಚಾಲನೆ

Last Updated 9 ಜುಲೈ 2022, 14:08 IST
ಅಕ್ಷರ ಗಾತ್ರ

ಹುಬ್ಬಳ್ಳಿ: ತಾಲ್ಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಯೋಗೇಶ್ವರ ಬೃಹತ್ ಏತ ನೀರಾವರಿ ಯೋಜನೆ ಕಾಮಗಾರಿಯ ಡ್ರೋಣ್‌ ಸಮೀಕ್ಷೆ ಕಾರ್ಯಕ್ಕೆ ಸಕ್ಕರೆ ಮತ್ತು ಕೈಮಗ್ಗ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಶನಿವಾರ ಚಾಲನೆ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ 2008ರಲ್ಲಿ ತುಪ್ಪರಿಹಳ್ಳ, ಬೆಣ್ಣಿಹಳ್ಳ, ವಿಜಯಪುರದ ಡೋಣಿ ಹಳ್ಳಗಳ ಬೃಹತ್ ನೀರಾವರಿ ಯೋಜನೆಗೆ ಚಾಲನೆ ನೀಡಲಾಗಿದೆ. ತುಪ್ಪರಿಹಳ್ಳವು 118 ಕಿ.ಮೀ. ಹರಿಯುತ್ತಿದ್ದು, ಅದರ ಅಭಿವೃದ್ಧಿಗೆ ಸರ್ಕಾರದಿಂದ ₹318 ಕೋಟಿ‌ ಅನುದಾನ‌ ಬಿಡುಗಡೆ ಮಾಡಲಾಗಿದೆ. ಆ ಪೈಕಿ ₹150 ಕೋಟಿ ಮೊತ್ತದ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT