ಮಂಗಳವಾರ, ಅಕ್ಟೋಬರ್ 27, 2020
20 °C
ಕೆಎಲ್‌ಇ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಅಭಿವೃದ್ಧಿ

ಕಿಮ್ಸ್‌ಗೆ ರೊಬೊಟಿಕ್ ವಾಹನ ಹಸ್ತಾಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ನಗರದ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿರುವ ‘ಪ್ರಧಾಯ’ ಹೆಸರಿನ ಸ್ವಯಂಚಾಲಿಕ ರೊಬೊಟಿಕ್ ವಾಹನವನ್ನು, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಬುಧವಾರ ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರಿಗೆ ಹಸ್ತಾಂತರಿಸಿದರು. 

ಬಳಿಕ ಮಾತನಾಡಿದ ಅವರು, ‘ಆಸ್ಪತ್ರೆಗಳಲ್ಲಿ ರೋಗಿಗಳ ವಾರ್ಡ್‌ಗಳಿಗೆ ಆಹಾರ ಮತ್ತು ಔಷಧಗಳನ್ನು ಈ ವಾಹನದ ಮೂಲಕ ತಲಪಿಸಬಹುದಾಗಿದೆ. ಕೊರೊನಾ ಕಾಲದಲ್ಲಿ ವಿದ್ಯಾರ್ಥಿಗಳು ಇಂತಹದ್ದೊಂದು ವಾಹನವನ್ನು ಅಭಿವೃದ್ಧಿಪಡಿಸಿರುವುದು ಅಭಿನಂದನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳಾದ ಕಿರಣ್ ಕೆ., ಸಂತೋಷ್ ಕೆ., ಮದನ್ ವೈ., ಅಭಿಲಾಷ್ ಜಿ., ಕಾರ್ತಿಕ್ ಆರ್., ಪ್ರಣವ್ ಕೆ., ಕೆ. ಅಭಿಷೇಕ್, ಅಭಿಷೇಕ್ ಎಚ್. ವಿನಾಯಕ್ ಎಚ್‌. ಹಾಗೂ ರಾಹುಲ್ ಪಿ. ಅವರ ತಂಡ ಈ ವಾಹನವನ್ನು ಅಭಿವೃದ್ಧಿಪಡಿಸಿದೆ.

‘ಕಿಮ್ಸ್ ತಜ್ಞ ವೈದ್ಯ ಡಾ.ಎಸ್.ವೈ. ಮುಲ್ಕಿ ಪಾಟೀಲ ಹಾಗೂ ಡಾ. ರಾಮಲಿಂಗಪ್ಪ ಅಂಟರತಾನಿ ಅವರು, ಕೋವಿಡ್ ಸಂದರ್ಭದಲ್ಲಿ ಸ್ವಯಂಚಾಲಿತ ಮಾರ್ಗದರ್ಶಿ ವಾಹನಗಳನ್ನು ಅಭಿವೃದ್ಧಿಪಡಿಸುವಂತೆ ಸಲಹೆ ನೀಡಿದ್ದರು’ ಎಂದು ವಿದ್ಯಾರ್ಥಿಗಳು ಹೇಳಿದರು.

‘ಅದರಂತೆ ಕಾರ್ಯಪ್ರವೃತ್ತರಾದ ನಮ್ಮ ತಂಡಕ್ಕೆ ಸ್ವರ್ಣ ಗ್ರೂಪ್‌ನ ಡಾ.ವಿ.ಎಸ್‌.ವಿ. ಪ್ರಸಾದ ಅವರು ಪ್ರಾಯೋಜಕತ್ವ ನೀಡಲು ಮುಂದೆ ಬಂದರು. ತಂಡಕ್ಕೆ ಪ್ರೋತ್ಸಾಹ ನೀಡುವಂತೆ ಹಿಂದಿನ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು, ಕೈಗಾರಿಕೆ ಜಂಟಿ ನಿರ್ದೇಶಕರಾಗಿದ್ದ ಮೋಹನ ಭರಮಕ್ಕನವರ ಅವರಿಗೆ ಸೂಚಿಸಿದ್ದರು. ಪ್ರಾಧ್ಯಾಪಕರಾದ ಡಾ. ರವಿ ಗುತ್ತಲ, ಡಾ.ಎಸ್‌.ಸಿ. ಸಜ್ಜನ ಮಾರ್ಗದರ್ಶನದಲ್ಲಿ ಸತತ ಪ್ರಯತ್ನದೊಂದಿಗೆ ವಾಹನ ಅಭಿವೃದ್ಧಿಪಡಿಸಿದೆವು’ ಎಂದು ತಿಳಿಸಿದರು.

ಕಿಮ್ಸ್ ಮುಖ್ಯ ಆಡಳಿತಾಧಿಕಾರಿ ರಾಜಶ್ರೀ ಜೈನಾಪುರ ಹಾಗೂ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು