ಬುಧವಾರ, ಏಪ್ರಿಲ್ 21, 2021
23 °C

ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಕಾಮಗಾರಿಗೆ ಶೆಟ್ಟರ್ ಭೂಮಿ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ನಗರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿದರು. ಈಗಾಗಲೇ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ಸಸಿ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದರು.

ವಾರ್ಡ್ 47ರ ರಾಮನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಅವರು, ಕೊಳಚೆ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಾಣವಾಗುತ್ತಿರುವ ಮನೆಗಳನ್ನು ಪರಿಶೀಲಿಸಿದರು. ಸಂಬಾಗಿ ಬಡಾವಣೆ ಹಾಗೂ ಬಸವ ನಗರದಲ್ಲಿ ನಡೆದ ಪರಿಸರ ದಿನಾಚರಣೆಯಲ್ಲಿ ಪಾಲ್ಗೊಂಡು ಸಸಿ ನೆಟ್ಟರು.

ಗೋಕುಲ ರಸ್ತೆಯ ಬಸವ ನಗರದಲ್ಲಿ ನಿರ್ಮಾಣವಾಗುತ್ತಿರುವ ಉದ್ಯಾನಕ್ಕೆ ಸಿದ್ಧಾರೂಢ ಉದ್ಯಾನವನ ಎಂಬ ನಾಮಫಲಕವನ್ನು ಅನಾವರಣಗೊಳಿಸಿದರು. ಜಗದೀಶ ನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದರು.

ವಾರ್ಡ್ 44ರ ಅರವಿಂದ ನಗರದಲ್ಲಿ ನಡೆದ ಬಿಜೆಪಿ ಕಚೇರಿ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು. ಗಿರಿಜಾ ಕಲ್ಯಾಣ ಮಂಟಪದಲ್ಲಿ ಕೋವಿಡ್–19ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಅಸಂಘಟಿತ ಕಾರ್ಮಿಕರಿಗೆ ದವಸ ಧಾನ್ಯಗಳ ಕಿಟ್ ವಿತರಿಸಿದರು.

ಶಾಸಕ ಅರವಿಂದ ಬೆಲ್ಲದ, ಹುಡಾ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಲಿಂಗರಾಜ ಪಾಟೀಲ, ರಾಘವೇಂದ್ರ ರಾಮದುರ್ಗ, ಸಂತೋಷ್ ಚವ್ಹಾಣ, ಮಹೇಂದ್ರ ಕವತಾಳ್, ಕೃಷ್ಣಾ ಗಂಡಗಾಳಕರ ಇದ್ದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು