ಕಟ್ಟಡಗಳ ಪರಿಶೀಲನೆಗೆ ಸೂಚನೆ

ಶುಕ್ರವಾರ, ಏಪ್ರಿಲ್ 26, 2019
32 °C
ಕಟ್ಟಡ ದುರಂತದ ಗಾಯಾಳುಗಳನ್ನು ಭೇಟಿ ಮಾಡಿದ ಸಚಿವ ಯು.ಟಿ. ಖಾದರ್

ಕಟ್ಟಡಗಳ ಪರಿಶೀಲನೆಗೆ ಸೂಚನೆ

Published:
Updated:
Prajavani

ಹುಬ್ಬಳ್ಳಿ: ‘ಅವಳಿನಗರದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಮನಬಂದಂತೆ ಅವೈಜ್ಞಾನಿಕವಾಗಿ ನಿರ್ಮಿಸಿರುವ ಬಹುಮಹಡಿ ಕಟ್ಟಡಗಳ ಸ್ಥಿರತೆಯನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಹೇಳಿದರು.

ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಧಾರವಾಡದ ಕುಮಾರೇಶ್ವನಗರದ ಬಹುಮಹಡಿ ಕಟ್ಟಡ ಕುಸಿತದ ಗಾಯಾಳುಗಳನ್ನು ಶನಿವಾರ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ ಬಳಿಕ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣದ ತನಿಖೆ ಆಧರಿಸಿ, ಮುಂದೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೇ ಅಥವಾ ಕೆಲಸದಿಂದ ವಜಾ ಮಾಡಬೇಕೇ ಎಂಬುದನ್ನು ತೀರ್ಮಾನಿಸಲಾಗುವುದು’ ಎಂದರು.

‘ಆರು ತಿಂಗಳ ಹಿಂದೆ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸಿ, ಖಾಸಗಿಯವರನ್ನು ಅವುಗಳ ವ್ಯಾಪ್ತಿಗೆ ತರಲಾಗಿದೆ. ಹಾಗಾಗಿ, ನಿಯಮ ಗಾಳಿಗೆ ತೂರಿ ಕಟ್ಟಡ ನಿರ್ಮಿಸುವ ಖಾಸಗಿ ಮಾಲೀಕರು ಹಾಗೂ ಗುತ್ತಿಗೆದಾರರು ಸುಲಭವಾಗಿ ನುಣುಚಿಕೊಳ್ಳಲು ಸಾಧ್ಯವಾಗದು. ಧಾರವಾಡದ ಪ್ರಕರಣದಲ್ಲೂ ಅದು ಸಾಧ್ಯವಿಲ್ಲ. ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ರಾಜಕೀಯ ಪ್ರಭಾವವೂ ಇದೆ:

ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಅಧಿಕಾರಿಗಳು ಒಂದೇ ಕಡೆ ಠಿಕಾಣಿ ಹೂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಹಲವು ವರ್ಷಗಳಿಂದ ಒಂದೇ ಕಡೆ ಇರುವ ಇಲಾಖೆಯ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿ ಬಂದಿವೆ. ಇದಕ್ಕೆ ಅವರಿಗಿರುವ ರಾಜಕೀಯ ಪ್ರಭಾವವೂ ಕಾರಣ. ಚುನಾವಣೆ ಮುಗಿದ ಬಳಿಕ, ಈ ರೀತಿ ಠಿಕಾಣಿ ಹೂಡಿರುವವರನ್ನು ಬೇರೆ ಕಡೆಗೆ ವರ್ಗಾವಣೆ ಮಾಡಲಾಗುವುದು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !