ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಾಗಿಂಗ್‌ಗೆ ಅಬ್ಬಯ್ಯ ಸೂಚನೆ

Last Updated 18 ಆಗಸ್ಟ್ 2019, 20:04 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಮಳೆ ನಿಂತ ಬೆನ್ನಲ್ಲೇ ನಗರದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಹಾಗಾಗಿ, ಎಲ್ಲೆಡೆ ಫಾಗಿಂಗ್ ಮಾಡುವ ಮೂಲಕ ರೋಗ ಬಾರದಂತೆ ಎಚ್ಚರಿಕೆ ವಹಿಸಬೇಕು’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಸೂಚಿಸಿದರು.

ಪಾಲಿಕೆ ಕಚೇರಿಯಲ್ಲಿ ಭಾನುವಾರ ಆಯುಕ್ತರು ಹಾಗೂ ವಲಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಮಳೆಯಿಂದಾಗಿ ಹಳೇ ಹುಬ್ಬಳ್ಳಿ ಭಾಗದಲ್ಲಿ ಸಾಕಷ್ಟು ಹಾನಿಯಾಗಿದ್ದು, ಸಾಂಕ್ರಮಿಕ ರೋಗಗಳ ಭೀತಿ ಆವರಿಸಿದೆ. ಆ ಪ್ರದೇಶದಲ್ಲಿ ಆದ್ಯತೆ ಮೇರೆಗೆ ಗಟಾರಗಳ ಸ್ವಚ್ಛತೆ ಹಾಗೂ ಫಾಗಿಂಗ್ ಕೆಲಸ ನಡೆಯಬೇಕು. ಅಲ್ಲಿ ಕೈಗೊಳ್ಳುವ ಕೆಲಸಗಳ ಬಗ್ಗೆ ನಿತ್ಯ ವರದಿ ಸಲ್ಲಿಸಬೇಕು’ ಎಂದರು.

ವಿದ್ಯುತ್ ಸಮಸ್ಯೆ ದೂರು:

‘ಕ್ಷೇತ್ರದ ಯಾವುದೇ ಭಾಗಕ್ಕೆ ಭೇಟಿ ನೀಡಿದರೂ ಜನರು ಬೀದಿ ದೀಪಗಳ ಬಗ್ಗೆ ದೂರು ನೀಡುತ್ತಿದ್ದಾರೆ. ಪಾಲಿಕೆಯ ವಿದ್ಯುತ್ ವಿಭಾಗದ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂಬುದೇ ತಿಳಿಯದಾಗಿದೆ. ವಿದ್ಯುತ್ ನಿರ್ವಹಣೆ ಗುತ್ತಿಗೆ ಪಡೆದವರಿಗೆ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕು. ಕೆಲಸದಲ್ಲಿ ನಿರ್ಲಕ್ಷ್ಯ ತೋರುವ ಗುತ್ತಿಗೆದಾರರ ಬಿಲ್ ಪಾವತಿ ತಡೆಯಂತಜ ಕಠಿಣ ನಿರ್ಧಾರ ಕೈಗೊಳ್ಳಬೇಕು’ ಎಂದ ಅಬ್ಬಯ್ಯ, ‘ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಬೀದಿ ದೀಪದ ಸಮಸ್ಯೆಗಳಿರುವ ಬಗ್ಗೆ ಸರ್ವೇ ಮಾಡಿ ವಾರ್ಡ್‌ವಾರು ವರದಿಯನ್ನು 3 ದಿನದಲ್ಲಿ ನೀಡಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT