ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಸೀಕೆರೆಯಲ್ಲಿ ವಂದೇ ಭಾರತ್ ನಿಲುಗಡೆಗೆ ಶಾಸಕ‌ ಎಚ್.ಡಿ.ರೇವಣ್ಣ ಮನವಿ

Published 23 ಜನವರಿ 2024, 15:50 IST
Last Updated 23 ಜನವರಿ 2024, 15:50 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಬೆಂಗಳೂರು-ಧಾರವಾಡ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಅರಸೀಕೆರೆಯಲ್ಲಿ ನಿಲುಗಡೆ ಮಾಡಬೇಕು ಎಂದು ಶಾಸಕ‌ ಎಚ್.ಡಿ.ರೇವಣ್ಣ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಅವರಿಗೆ ಮಂಗಳವಾರ ಮನವಿಪತ್ರ ಸಲ್ಲಿಸಿದರು‌.

ಹುಬ್ಬಳ್ಳಿಯ ನೈರುತ್ಯ ರೈಲ್ವೆ ಕಚೇರಿಗೆ ಸಂಸದ ಪ್ರಜ್ವಲ್‌ ರೇವಣ್ಣ ಅವರೊಂದಿಗೆ ಭೇಟಿಯಾದ ಅವರು, ‘ವಂದೇ ಭಾರತ್ ರೈಲು ಸದ್ಯ ಹುಬ್ಬಳ್ಳಿ ಜಂಕ್ಷನ್‌, ದಾವಣಗೆರೆ ಮತ್ತು ಯಶವಂತಪುರದಲ್ಲಿ ಮಾತ್ರ ನಿಲುಗಡೆ ಆಗುತ್ತದೆ. ಅರಸೀಕೆರೆಯಲ್ಲಿ ನಿಲುಗಡೆ ಮಾಡಿದರೆ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ’ ಎಂದರು.

‘ಹಾಸನ ತಾಲ್ಲೂಕಿನ ಮೊಸಳೆ ಹೊಸಹಳ್ಳಿ ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಬೇಕು’ ಎಂದು ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT