ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಾಜಕತೆ ಸೃಷ್ಟಿಸುವವರ ವಿರುದ್ಧ ಕ್ರಮಕೈಗೊಳ್ಳಿ: ಜಗದೀಶ ಶೆಟ್ಟರ್‌

Last Updated 18 ಮಾರ್ಚ್ 2022, 11:07 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹಿಜಾಬ್‌ ಕುರಿತ ನ್ಯಾಯಾಲಯದ ಆದೇಶದ ಪಾಲಿಸದೆ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಶಾಸಕ ಜಗದೀಶ ಶೆಟ್ಟರ್‌ ಒತ್ತಾಯಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿ. ಅದು ಬಿಟ್ಟು ಬೀದಿಯಲ್ಲಿ ನಿಂತು ಪ್ರತಿಭಟನೆ, ಬಂದ್ ಮಾಡುವುದನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ನ್ಯಾಯಾಲಯದ ಮೇಲೆಯೇ ಒತ್ತಡ ಹಾಕುವಂತಹ ಕೆಲಸ ನಡೆಯುತ್ತಿದೆ ಎಂದು ಟೀಕಿಸಿದರು.

ಗುಜರಾತ್ ಪಠ್ಯದಲ್ಲಿ ಭಗವದ್ಗೀತೆ ಅಧ್ಯಯನ ಅಳವಡಿಕೆ ಬಗೆಗೆ ಗೊತ್ತಿಲ್ಲ. ಆದರೆ, ಭಗದ್ಗೀತೆ ಅಧ್ಯಯನ ಒಳ್ಳೆಯದೇ ಆಗಿದೆ. ಭಗವದ್ಗೀತೆಯಲ್ಲಿನ ಒಳ್ಳೆಯ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬಹುದಾಗಿದೆ ಎಂದರು.

ವಿಜಯೇಂದ್ರ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹುಬ್ಬಳ್ಳಿಗೆ ಬಂದಿದ್ದ ವಿಜಯೇಂದ್ರ ಅವರು, ನಮ್ಮ ಮನೆಗೆ ಭೇಟಿ ಕೊಟ್ಟಿದ್ದರು. ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿರುವ ಅವರು ನಮ್ಮ ಮನೆಗೆ ಭೇಟಿ ಕೊಟ್ಟಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಶೆಟ್ಟರ್‌ ಹೇಳಿದರು.

ಕಾಂಗ್ರೆಸ್‌ ಮುಖಂಡರು ಬಂದರೆ ಊಹಾಪೋಹ ಎದ್ದೇಳಬಹುದು. ಆದರೆ, ಬಿಜೆಪಿ ಮುಖಂಡರೂ ಬಿಜೆಪಿ ಮುಖಂಡರ ಮನೆಗೆ ಭೇಟಿ ನೀಡಿದರೂ ತಪ್ಪೇ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT