ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಶಾಸಕ ಮಹೇಶ ಟೆಂಗಿನಕಾಯಿ

Published 10 ಮೇ 2024, 8:08 IST
Last Updated 10 ಮೇ 2024, 8:08 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ಪ್ರಕರಣದಲ್ಲಿ ಎಸ್ ಐಟಿ ಸರಿಯಾದ ದಿಕ್ಕಿನಲ್ಲಿ‌ ತನಿಖೆ ನಡೆಸುತ್ತಿರುವ ಲಕ್ಷಣ ಗೋಚರಿಸುತ್ತಿಲ್ಲ' ಎಂದರು.

'ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂಬುದು ನಮ್ಮ ಆಗ್ರಹವೂ ಆಗಿದೆ. ಯಾರನ್ನೂ ಕ್ಷಮಿಸುವ ಮಾತಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸಬೇಕು' ಎಂದು ಆಗ್ರಹಿಸಿದರು.

'ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸುವ ಕುರಿತಾಗಿ ಮೇ 11 ರಂದು ಬೆಂಗಳೂರಿನಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಅವಲೋಕನಾ ಸಭೆಯಲ್ಲಿ ವರಿಷ್ಠರು ತೀರ್ಮಾನ ಕೈಗೊಳ್ಳುವರು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT