ಹುಬ್ಬಳ್ಳಿ: ‘ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಅರ್ಹ ಮತದಾರರ ಹೆಸರನ್ನು ನೋಂದಣಿ ಮಾಡಿಸಬೇಕು’ ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು.

ನಗರದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ 25 ವಾರ್ಡ್ಗಳ ಮತದಾರರ ಮನೆ, ಕಾಲೇಜುಗಳಿಗೆ ತೆರಳಿ ಅರ್ಹರನ್ನು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಬೇಕು’ ಎಂದರು.

‘ವಿಧಾನ ಪರಿಷತ್ ಚುನಾವಣೆಯು ಅತ್ಯಂತ ಮಹತ್ವವಾಗಿದ್ದು, ಎಲ್ಲ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಭಾನುವಾರ ಪ್ರಸಾರವಾಗುವ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮದ 127ನೇ ಆವೃತ್ತಿಯ ವೀಕ್ಷಣೆಗೆ ಹು–ಧಾ ಸೆಂಟ್ರಲ್ ಕ್ಷೇತ್ರದ ಎಲ್ಲ ಬೂತ್ಗಳಲ್ಲಿ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು’ ಎಂದು ಹೇಳಿದರು.

ಬಿಜೆಪಿ ಕ್ಷೇತ್ರ ಘಟಕದ ಅಧ್ಯಕ್ಷ ರಾಜು ಕಾಳೆ, ಪ್ರವೀಣ ಪವಾರ, ಕೃಷ್ಣ ಗಂಡಗಳೇಕರ, ಪ್ರವೀಣ ಹುರುಳಿ, ರವಿ ನಾಯಕ, ಶಶಿಶೇಖರ್ ಡಂಗನವರ, ಅಕ್ಕಮಹಾದೇವಿ ಹೆಗಡೆ ಸೇರಿದಂತೆ ಬೂತ್ ಅಧ್ಯಕ್ಷರು, ಉಸ್ತುವಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.