ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ’: ಮಹೇಶ ಟೆಂಗಿನಕಾಯಿ

Published 6 ಜನವರಿ 2024, 16:25 IST
Last Updated 6 ಜನವರಿ 2024, 16:25 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಇಲ್ಲಿನ ಅಶೋಕನಗರ ರೈಲ್ವೆ ಸೇತುವೆಯಿಂದ ಶಕ್ತಿ ಕಾಲೊನಿವರೆಗಿನ 2.4 ಕಿ.ಮೀ. ಉದ್ದದ ರಸ್ತೆ ಕಾಮಗಾರಿಯನ್ನು  ಮಾರ್ಚ್ 31ರ ಒಳಗೆ  ಪೂರ್ಣಗೊಳಿಸಬೇಕು’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಸೂಚಿಸಿದರು.

ವಿಶ್ವೇಶ್ವರ ನಗರದ ಉದ್ಯಾನದಲ್ಲಿ ಶನಿವಾರ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ‘ಅನುದಾನಕ್ಕೆ ಯಾವುದೇ ಸಮಸ್ಯೆ ಇಲ್ಲ. ರಸ್ತೆಯು ಗುಣಮಟ್ಟದಿಂದ ಕೂಡಿರಬೇಕು’ ಎಂದರು. 

ಹು–ಧಾ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಮಾತನಾಡಿ, ‘ಶೀಘ್ರದಲ್ಲಿ ಕಾಮಗಾರಿ ಶುರುವಾಗಲಿದೆ’ ಎಂದು ಹೇಳಿದರು.

ಪಾಲಿಕೆ ಸದಸ್ಯ ವೀರಣ್ಣ ಸವಡಿ, ಸಂತೋಷ ಚೌಹಾಣ್, ಬೀರಪ್ಪ ಖಂಡೇಕರ, ಸಿದ್ದು ಮೊಗಲಿಶೆಟ್ಟರ್, ಪಾಲಿಕೆ ನೋಡಲ್ ಅಧಿಕಾರಿ ತುಬಾಕಿ ಬೇವೂರು, ಬಿಜೆಪಿ ವಕ್ತಾರ ರವಿ ನಾಯಕ, ಲೋಕೋಪಯೋಗಿ ಇಲಾಖೆ, ಎಲ್‌ ಆ್ಯಂಡ್‌ ಟಿ, ಪಾಲಿಕೆ  ಅಧಿಕಾರಿಗಳು ಉಪಸ್ಥಿತರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT