ಹುಬ್ಬಳ್ಳಿ: ‘ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರದ್ದು ಪಡಿಸಿದ್ದ ರಾಜ್ಯ ಸರ್ಕಾರಕ್ಕೆ ಕೋರ್ಟ್ ಛೀಮಾರಿ ಹಾಕಿದ್ದು, ಪ್ರಕರಣ ಇದೀಗ ಮತ್ತೆ ಪುನಃ ವಿಚಾರಣೆಗೆ ಬರಲಿದೆ’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಕಲ್ಲು ಹೊಡೆದವರನ್ನು ಅಮಾಯಕರು ಎಂದು ಕಾಂಗ್ರೆಸ್ ಸರ್ಕಾರ ಹೇಳಿ, ಅವರ ಮೇಲಿದ್ದ ಪ್ರಕರಣವನ್ನು ರದ್ದು ಪಡಿಸಿತ್ತು. ಅದು ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸವಾಗಿತ್ತು. ಕೋರ್ಟ್ ನಿರ್ಧಾರದಿಂದ ಸರ್ಕಾರಕ್ಕೆ ಮುಖಭಂಗವಾಗಿದೆ’ ಎಂದರು.

‘ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಕಾಂಗ್ರೆಸ್ ಏನುಬೇಕಾದರೂ ಮಾಡುತ್ತದೆ. ಸಮಾಜ ಘಾತುಕ ಶಕ್ತಿಗಳಿಗೆ ಯಾವ ಪಕ್ಷದವರೂ ಪ್ರೋತ್ಸಾಹ ನೀಡಬಾರದು. ಇನ್ನುಮುಂದೆ ಯಾರು ಸಹ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.