ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯಮನಗರಕ್ಕೆ ಮೂಲಸೌಕರ್ಯ: ಶಾಸಕ ಪ್ರಸಾದ ಅಬ್ಬಯ್ಯ

Last Updated 22 ಜನವರಿ 2022, 16:29 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಉದ್ಯಮನಗರ ಕೈಗಾರಿಕಾ ಪ್ರದೇಶಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಮಾದರಿ ಪ್ರದೇಶವನ್ನಾಗಿ ರೂಪಿಸಲಾಗುವುದು’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಭರವಸೆ ನೀಡಿದರು.

ಇಲ್ಲಿನ ಪಿ.ಬಿ. ರಸ್ತೆಯ ಉದ್ಯಮ ನಗರಕ್ಕೆ ಶನಿವಾರ ಭೇಟಿ ನೀಡಿ ಸ್ಥಳೀಯ ಕಾರ್ಖಾನೆ ಮಾಲೀಕರ ಕುಂದುಕೊರತೆ ಆಲಿಸಿದ ಅವರು, ‘ಈ ಪ್ರದೇಶದಲ್ಲಿ 30 ಸಣ್ಣ ಕೈಗಾರಿಕೆಗಳಿದ್ದು, 400ಕ್ಕೂ ಅಧಿಕ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದರು.

‘ಇಲ್ಲಿ ಉತ್ತಮ ರಸ್ತೆ, ಶುದ್ಧ ಕುಡಿಯುವ ನೀರು, ಗಟಾರ, ಬೀದಿ ದೀಪ ಸೇರಿದಂತೆ ಇತರ ಮೂಲಸೌಲಭ್ಯಗಳನ್ನು ಒದಗಿಸಲು ವಿಸೃತ ಯೋಜನೆ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು’ ಎಂದು ಹೇಳಿದರು.

ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ, ಸ್ಥಳೀಯರು ಹಾಗೂ ಕೈಗಾರಿಕೆಗಳ ಮಾಲೀಕರು ಅಬ್ಬಯ್ಯ ಅವರಿಗೆ ಮನವಿ ಸಲ್ಲಿಸಿದರು.

ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಮೋಹನ ಅಸುಂಡಿ, ವಿಜನಗೌಡ ಪಾಟೀಲ, ಸ್ಥಳೀಯರಾದ ಎ.ಎಚ್. ಕುಸುಗಲ್, ಬಸವರಾಜ ಪವಾರ್, ಅಜಿತ್ ಕಲಘಟಗಿ, ಈರಯ್ಯ ಇಂಗಳಹಳ್ಳಿಮಠ, ಸುನೀಲ ಸೋಳಂಕಿ, ಮಲ್ಲಿಕಾರ್ಜುನ ಮೂರಸುಳಿ, ಅಮಿತ್ ರಾಜಪುರೋಹಿತ್, ಸಮದ್ ಗುಲಬರ್ಗಾ, ಶಫೀ ಪಾಟೀಲ, ಸಂಜಯ್ ಸೇಠ, ಅಜರ್ ಮನಿಯಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT