ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡ್ಮೂರು ಬಾರಿ ಸಚಿವರಾದವರು ಈಗ ಸ್ಥಾನ ಬಿಟ್ಟುಕೊಡಲಿ: ರೇಣುಕಾಚಾರ್ಯ ಆಗ್ರಹ

Last Updated 29 ಡಿಸೆಂಬರ್ 2021, 6:32 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹಿಂದೆ ಎರಡ್ಮೂರು‌ ಬಾರಿ ಸಚಿವರಾಗಿ, ಈಗಲೂ ಸಚಿವರಾಗಿ‌ ಇರುವವರು ತಮ್ಮ ಸ್ಥಾನ ಬಿಟ್ಟುಕೊಡಲಿ. ಹೊಸಬರಿಗೆ ಅವಕಾಶ ಕೊಡಲಿ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಆಗ್ರಹಿಸಿದರು.

ಇಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿ ನನಗೆ ಸಚಿವ ಸ್ಥಾನ ಕೊಡಿ‌ ಎಂದು ಕೇಳುವುದಿಲ್ಲ. ಅದರ ಆಸೆಯೂ ನನಗಿಲ್ಲ. ಹೊಸ ಶಾಸಕರಿಗೆ ಸಚಿವ ಸ್ಥಾನ ಕೊಟ್ಟು‌ ಅನುಭವಿ ನಾಯಕರು ಪಕ್ಷ ಸಂಘಟನೆ ಕೆಲಸದಲ್ಲಿ ‌ತೊಡಗಿಕೊಳ್ಳಬೇಕು. ಇದನ್ನು ಪಕ್ಷದ ಹಿರಿಯರಿಗೂ ತಿಳಿಸಿದ್ದೇನೆ ಎಂದರು.

ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಂಪುಟ ವಿಸ್ತರಣೆ ಮಾಡಬೇಕು. ನನಗೆ ಸಚಿವ ಸ್ಥಾನಕ್ಕಿಂತ ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದರು.

ಹುಬ್ಬಳ್ಳಿಯಲ್ಲಿ ಕಾರ್ಯಕಾರಿಣಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ ಬಿಟ್ಟಿಲ್ಲ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಅಡ್ಡಗಾಲು ಹಾಕಿತು ಎಂದು ಟೀಕಿಸಿದರು.

ಮತಾಂತರ ನಿ಼ಷೇಧ ಕಾಯ್ದೆ ಜಾರಿ ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ ಅನುಸರಿಸುತ್ತಿದೆ. ಕಾಯ್ದೆ ಜಾರಿಗೆ ತರುವಂತೆ ಸಾಧು ಸಂತರು, ಧಾರ್ಮಿಕ ಮುಖಂಡರು ನಮ್ಮ ಸರ್ಕಾರಕ್ಕೆ ಮನವಿ ಮಾಡಿದ್ದರು ಆಸೆ, ಆಮಿಷಕ್ಕೆ ಮತಾಂತರ ಆಗುತ್ತಿದೆ ಅಂತ ಹೇಳಿದ್ದರು ಎಂದರು.

ಇಟಲಿಯ ಸೋನಿಯಾ ಗಾಂಧಿ ಮಾತು ಕೇಳುವ ಕಾಂಗ್ರೆಸ್ಸಿಗರಿಗೆ ತಾಕತ್ತಿದ್ದರೆ, ಒಂದೇ ಒಂದು ಸಾರಿ
ಬಹಿರಂಗವಾಗಿ ನಾವು ಹಿಂದೂ ಎಂದು ಹೇಳಿಕೊಳ್ಳಲಿ ನೋಡೋಣ ಎಂದು ಸವಾಲು ಹಾಕಿದರು.

ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಗರ್ಭಪಾತ ಆಗಿದೆ. ಅದು ಹೆಣ್ಣೋ ಗಂಡೋ ಗೊತ್ತಿಲ್ಲ ಎಂದರು.

ಮುಂಬರುವ ಚುನಾವಣೆಯಲ್ಲಿ ನಿಮಗೆ ಹಿಂದೂಗಳು ತಕ್ಕ ಪಾಠ ಕಲಿಸುತ್ತಾರೆ ಎಂದು ಕಾಂಗ್ರೆಸ್ ಹೇಳಿದರು.

ಎಂಇಎಸ್ ಪುಂಡಾಟದ ಹಿಂದೆ ಕಾಂಗ್ರೆಸ್ ಕೈವಾಡ

ಹುಬ್ಬಳ್ಳಿ: ರಾಜ್ಯದಲ್ಲಿ ‌ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ರೇಣುಕಾಚಾರ್ಯ ಆರೋಪಿಸಿದರು.

ಗುರುವಾರದ ಬಂದ್ ಗೆ ಯಾವುದೇ ಅರ್ಥವಿಲ್ಲ. ಬಂದ್ ಮಾಡುವು ದರಿಂದ ಎಂಇಎಸ್ ನಿ಼ಷೇಧ ಆಗುವದಿಲ್ಲ. ಜನ ಕೋವಿಡ್ ನಿಂದ ಬಳಲಿ ಹೋಗಿದ್ದಾರೆ.
ಇಂತ ಸಮಯದಲ್ಲಿ ಬಂದ್ ಮಾಡೋದು ಸೂಕ್ತ ಅಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT