ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವರಾಜ ಹೊರಟ್ಟಿ ಚಿತ್ರವಿರುವ ಬ್ಯಾಡ್ಜ್ ಧರಿಸಿ ಮತಗಟ್ಟೆಗೆ ಬಂದ ಶಿಕ್ಷಕ

Last Updated 13 ಜೂನ್ 2022, 6:04 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಶಿಕ್ಷಕರೊಬ್ಬರು ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರ ಭಾವಚಿತ್ರದ ಬ್ಯಾಡ್ಜ್ ಧರಿಸಿ, ಇಲ್ಲಿನ‌ ದೇಶಪಾಂಡೆ ನಗರದ ಎನ್‌.ಆರ್. ದೇಸಾಯಿ ರೋಟರಿ ಶಾಲೆಯ ಮತಗಟ್ಟೆಗೆ ಭೇಟಿ ನೀಡುವ ಮೂಲಕ, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದರು.

ಮತಗಟ್ಟೆಗೆ ಬಂದ ಇಬ್ಬರು ಶಿಕ್ಷಕರು ವಿಜಯದ ಸಂಕೇತ ಪ್ರದರ್ಶಿಸಿದರು. ಈ ಪೈಕಿ, ನಗರದ ಸಿದ್ದರಾಮೇಶ್ವರ ಪ್ರೌಢಶಾಲೆಯ ಶಶಿಧರ ಗಾಜಿ ಅವರು ಬ್ಯಾಡ್ಜ್ ಧರಿಸಿದ್ದರು. ಈ ಕುರಿತು, ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.

ಚುನಾವಣಾ ಅಧಿಕಾರಿಗಳು ಮತಗಟ್ಟೆಗಳ ಬಳಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮತಗಟ್ಟೆ ಸುತ್ತಮುತ್ತ ಮಾಡಬೇಕು. ಘಟನೆ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT