ಬುಧವಾರ, ಅಕ್ಟೋಬರ್ 28, 2020
18 °C

ಜನರ ಪ್ರಧಾನಿಯಾದ ಮೋದಿ: ಪ್ರಾಣೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಕೆಂಪುಕೋಟೆಯ ಮೇಲೆ ಧ್ವಜಾರೋಹಣ ಮಾಡಿ ಎಲ್ಲರೂ ಶೌಚಾಲಯ ಹೊಂದಬೇಕು ಎನ್ನುವ ಅರಿವು ಮೂಡಿಸಿದ್ದರು. ಸದಾ ಜನರ ಒಳಿತು ಬಯಸುವ ಕೆಲಸ ಮಾಡುತ್ತಿರುವ ಅವರು ಜನರ ಪ್ರಧಾನಿಯಾಗಿದ್ದಾರೆ ಎಂದು ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಹೇಳಿದರು.

ಸೇವಾ ಸಪ್ತಾಹ ಅಂಗವಾಗಿ ಬಿಜೆಪಿ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ‘ನರೇಂದ್ರ ಮೋದಿ ವ್ಯಕ್ತಿ ವ್ಯಕ್ತಿತ್ವ ಸಂದೇಶ’ ವರ್ಚುವಲ್‌ ರ‍್ಯಾಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಮೋದಿ ಅವರ ವ್ಯಕ್ತಿತ್ವದ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಅವರು ಮೊದಲ ಬಾರಿಗೆ ಸಂಸತ್ತಿಗೆ ಪ್ರವೇಶಿಸಿದಾಗ ಅಲ್ಲಿನ ನೆಲಕ್ಕೆ ಹಣೆ ಹಚ್ಚಿ ನಮಸ್ಕಾರ ಮಾಡಿದ್ದನ್ನೂ ಯಾರೂ ಮರೆತಿಲ್ಲ. ಚಂದ್ರಯಾನ–2 ಯೋಜನೆ ವಿಫಲಗೊಂಡಾಗ ವಿಜ್ಞಾನಿಗಳಲ್ಲಿ ತುಂಬಿದ ಭರವಸೆ ಅಪಾರವಾದದ್ದು’ ಎಂದು ನೆನಪಿಸಿಕೊಂಡರು.

‘ರಾಜಕಾರಣದಲ್ಲಿ ಎಂದೂ ಅವರು ಭ್ರಷ್ಟಾಚಾರದ ಸುಳಿಗೆ ಸಿಲುಕಿದವರಲ್ಲ. ರಾಮಾಯಣ ಮತ್ತು ಮಹಾಭಾರತದ ಕಥೆಗಳು ಬಂದಿವೆ. ಮುಂದೊಂದು ದಿನ ಮೋದಿ ವ್ಯಕ್ತಿತ್ವದ ಬಗ್ಗೆ ಮೋದಿಮಯ ಎನ್ನುವ ಸರಣಿ ಬಂದರೂ ಅಚ್ಚರಿಯಿಲ್ಲ’ ಎಂದರು.

ಆರು ಅಡಿ ಅಂತರ ಕಾಯ್ದುಕೊಂಡು ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಸಚಿವ ಜಗದೀಶ ಶೆಟ್ಟರ್‌ ಚಾಲನೆ ನೀಡಿದರು. ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್‌, ಬಿಜೆಪಿ ಮುಖಂಡರಾದ ಮಹೇಶ ಟೆಂಗಿನಕಾಯಿ, ಲಿಂಗರಾಜ ಪಾಟೀಲ, ನಾರಾಯಣ ಜರತಾರಘರ, ದತ್ತಮೂರ್ತಿ ಕುಲಕರ್ಣಿ, ವಿಜಯಾನಂದ ಶೆಟ್ಟಿ, ತಿಪ್ಪಣ್ಣ ಮಜ್ಜಗಿ ಮತ್ತು ರವಿ ನಾಯ್ಕ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು