ಭಾನುವಾರ, ಡಿಸೆಂಬರ್ 8, 2019
25 °C

ಹಿರಿಯ ಪತ್ರಕರ್ತ, ಸಾಹಿತಿ ಮೋಹನ ನಾಗಮ್ಮನವರ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ : ಉತ್ತರ ಕರ್ನಾಟಕ ಭಾಗದ ಹಿರಿಯ ಪತ್ರಕರ್ತ, ಸಾಹಿತಿ ಹಾಗೂ ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ಮೋಹನ ನಾಗಮ್ಮನವರ ಶನಿವಾರ ಬೆಳಗ್ಗೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ನಿಧನರಾದರು.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ನಿಧನರಾದರು. ಅವರು ಲಂಕೇಶ್ ಪತ್ರಿಕೆ, ರಾಜಕೀಯ ರಂಗ ಪತ್ರಿಕೆಗಳ ಮೂಲಕ ಈ ಭಾಗದ ಅನೇಕ ಸಮಸ್ಯೆಗಳಿಗೆ ಧ್ವನಿಯಾಗಿದ್ದರು.

ಜನತಾ ಪರಿವಾರದ ಅನೇಕ ನಾಯಕರ ಒಡನಾಟ ಹೊಂದಿದ್ದರು. ಬಳಿಕ ಕನ್ನಡ ನಾಡು, ಬಿಎಸ್‌ಪಿ ಪಕ್ಷ ಸೇರಿದ್ದರು. ಅಲ್ಲದೆ ಧಾರವಾಡ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಅವರ ಲೇಖನಗಳು, ಸಾಹಿತ್ಯ, ಸಮಾಜ ಸೇವೆ ಪರಿಗಣಿಸಿ ಅವರಿಗೆ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಹದಿಮೂರುಕ್ಕೂ ಹೆಚ್ಚು ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದ್ದು, ಬಂಡಾಯ ಸಾಹಿತ್ಯದ ಮೂಲಕ ಜನರಿಗೆ ಹತ್ತಿರವಾಗಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಿತ್ತು. ಅವರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಉತ್ಸುಕರಾಗಿದ್ದರು. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು